ಹಾಡಹಗಲೇ ಮಹಿಳೆ ಮೇಲೆ ಯುವಕರಿಂದ ಅತ್ಯಾಚಾರಕ್ಕೆ ಯತ್ನ

Public TV
1 Min Read
kasabpeth police staion hubballi 1

ಹುಬ್ಬಳ್ಳಿ: ಹಾಡಹಗಲೇ ಒಂಟಿ ಮಹಿಳೆ (Woman) ಮೇಲೆ ಯುವಕರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

ಹಳೇ ಹುಬ್ಬಳ್ಳಿಯ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಉಲ್ಪಥ್ ಅಲಿಯಾಸ್ ನಾಮ್, ಮಲಿಕ್ ಹಾಗೂ ಮುಬಾರಕ್ ಅಲಿಯಾಸ್ ಟುಬೋ ಎಂಬ ಮೂವರನ್ನು ಕಸಬಾಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RApe 1

ಬುಕ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಒಬ್ಬರು ಮಧ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಮಹಿಳೆಯನ್ನು ಬಾಯಿ ಮುಚ್ಚಿ ಎಳೆದೊಯ್ದು ಯುವಕರ ತಂಡ ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದನ್ನೂ ಓದಿ: ಗೋಮಾಂಸ ಮಾರಾಟ ಮಾಡ್ತಿದ್ದ ಇಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ – ವೀಡಿಯೋ ವೈರಲ್

kasabpeth police staion hubballi

ಈ ವೇಳೆ ಮಹಿಳೆ ಚಿರಾಟ ನಡೆಸಿದ್ದಾಳೆ. ಈ ಸದ್ದು ಕೇಳಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದವರು ಸ್ಥಳಕ್ಕೆ ಓಡಿ ಬರುತ್ತಲೇ ಮೂವರು ಯುವಕರು ಪರಾರಿಯಾಗಿದ್ದಾರೆ. ಈ ಸಂಬಂಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಸಂಬಂಧಿಕರು ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಕೇವಲ ಮೂರು ಗಂಟೆಯಲ್ಲಿ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ. ಸದ್ಯ ಮಹಿಳೆಗೆ ಕಿಮ್ಸ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಸಾವಿನಲ್ಲೂ ಒಂದಾದ ದಂಪತಿ – ಪತಿ ಸಾವಿನ ಸುದ್ದಿ ಕೇಳಿ ಪತ್ನಿಗೆ ಹೃದಯಾಘಾತ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *