ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ (Shootout) ವೆಬ್ ಸಿರೀಸ್ ನಲ್ಲಿ ನಟಿಸಿದ್ದ ಹಾಗೂ ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು (Telugu) ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ (Sudhir Verma) ಇಹಲೋಕ ತ್ಯಜಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಇಂದು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.
ಸುಧೀರ್ ನಿಧನದ ಸುದ್ದಿ ಹರಡುತ್ತಿದ್ದಂತೆಯೇ ಅವರ ಮನೆಗೆ ಧಾವಿಸಿರುವ ಅನೇಕ ಕಲಾವಿದರು, ಸುಧೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಇಂದು ಅಥವಾ ನಾಳೆ ಸುಧೀರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗದೇ ಇದ್ದರೂ, ವೈಯಕ್ತಿಕ ಕಾರಣಕ್ಕಾಗಿ ಅವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಾನ್ಯ ಅಯ್ಯರ್ ಬೆರಳಲ್ಲಿ ಶೆಟ್ಟಿ ವಧು ಧರಿಸುವ ರಿಂಗ್ ನೋಡಿ ಶಾಕ್ ಆದ ನೆಟ್ಟಿಗರು
ಸೆಕೆಂಡ್ ಹ್ಯಾಂಡ್, ಕುಂದನಪು ಬೊಮ್ಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಸುಧೀರ್, ಎರಡೂ ಚಿತ್ರಗಳ ಮೂಲಕ ಒಳ್ಳೆಯ ಹೆಸರನ್ನು ಸಂಪಾದಿಸಿದ್ದರು. ಆದರೆ, ಹೇಳಿಕೊಳ್ಳುವಂತಹ ಅವಕಾಶ ಅವರಿಗೆ ಸಿಗಲಿಲ್ಲ. ಹಾಗಾಗಿ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಜ್ಯೂನಿಯರ್ ಆರ್ಟಿಸ್ಟ್ ಆಗಿ ಸಿನಿಮಾ ರಂಗಕ್ಕೆ ಬಂದವರು, ನಂತರ ಕಷ್ಟಪಟ್ಟು ನಾಯಕನ ಸ್ಥಾನ ಏರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k