ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಸುಂದರಿ ಅರೆಸ್ಟ್

Public TV
1 Min Read
KENGERI MURDER

ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ (Woman Murder Case Kengeri)  ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು.

ಪ್ರಕರಣದ ವಿವರ: ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ ಮೂಲತಃ ಕೋಲಾರ ಜಿಲ್ಲೆಯವಳಾಗಿದ್ದು, ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಈ ವೇಳೆ ಆಕೆ ಪ್ರಿಯಕರನನ್ನೇ ತನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿದ್ದಳು. ಆದ್ರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ಇದನ್ನೂ ಓದಿ: ಭಾಗಮಂಡಲ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ – ಗ್ರಾಮಗಳಿಗೆ ನೆರೆ ಭೀತಿ ಇಲ್ಲ

ಇತ್ತ ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗಾದ್ರೆ ಕೆಲಸಕ್ಕೆ ಹೋಗುತ್ತಿದ್ದರು.

ದಿವ್ಯಾ ಹಾಗೂ ಆಕೆಯ 2 ವರ್ಷದ ಮಗು ಮಾತ್ರ ಮನೆಯಲ್ಲಿರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕಾ ಕೊಲೆ ಮಾಡಿದ್ದಳು. ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡುತ್ತಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದರು.

Share This Article