ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ. ಇದನ್ನೂ ಓದಿ: ಲವ್ವರ್ ಜೊತೆ ಸೇರಿ ಪತಿ ಹತ್ಯೆ – ಟೈಲ್ಸ್‌ನ ಕೆಳಗೆ ಮೃತದೇಹ ಹೂತಿಟ್ಟ ಪತ್ನಿ!
ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಅಭಿಷೇಕ್ ಎಂಬಾತನ ಮೇಲೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ಜೊತೆಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ವೈರಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ದೆಹಲಿಯಲ್ಲಿ ಭೂಕಂಪನ ಅನುಭವ – 3.2 ತೀವ್ರತೆ ದಾಖಲು