ಮುಂಬೈ: 20 ವರ್ಷದ ಯುವತಿಯೊಬ್ಬಳು 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ(Mumbai) ದಾದರ್ ಪ್ರದೇಶದಲ್ಲಿ ನಡೆದಿದೆ.
ಬಿ.ಕಾಂ. ವಿದ್ಯಾರ್ಥಿನಿ ಝಾನಾ ಸೇಥಿಯಾ(20) ಮೃತ ಯುವತಿ. ಇದನ್ನೂ ಓದಿ: ಪೋಷಕರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ – ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ವಿದ್ಯಾರ್ಥಿನಿ ಸಾವು
ಝಾನಾ, ಹಿಂದೂ ಕಾಲೋನಿಯ ಟೆಕ್ನೋ ಹೈಟ್ಸ್ ಕಟ್ಟಡದ ಎಂಟನೇ ಮಹಡಿಯಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಳು. ಪ್ರತಿದಿನ ಆಕೆ, ಇಬ್ಬರು ಸ್ನೇಹಿತರೊಂದಿಗೆ 14ನೇ ಮಹಡಿಯಲ್ಲಿರುವ ಟೆರೇಸ್‌ಗೆ ತೆರಳುತ್ತಿದ್ದಳು. ಮಂಗಳವಾರ ಸಂಜೆಯೂ ಸಹ ಸ್ನೇಹಿತರೊಂದಿಗೆ ಟೆರೇಸ್‌ಗೆ ತೆರಳಿದ್ದಳು. ಈ ವೇಳೆ ಝಾನಾ ಟೆರೇಸ್‌ನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಫ್ಯಾನ್ಸ್‌ಗೆ ಬಹಿರಂಗ ಪತ್ರ ಬರೆದ ನಟ
ಆಸ್ಪತ್ರೆಗೆ ಕರೆದೊಯ್ದ ವೇಳೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಡೈರಿಯಲ್ಲಿ ಆತ್ಮಹತ್ಯೆ ಆಲೋಚನೆಗಳ ಬಗ್ಗೆ ಆಕೆ ಬರೆದುಕೊಂಡಿರುವುದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್ ಶಾಕ್ – ಲೋಕಾ ದಾಳಿ ವೇಳೆ ಪರಾರಿ
ಪ್ರೇಮ ವೈಫಲ್ಯದಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು ಎಂದು ಸ್ನೇಹಿತರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಮಟುಂಗಾ ಪೊಲೀಸ್ ಠಾಣೆಯಲ್ಲಿ( Matunga police station) ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.