ಚಾಮರಾಜನಗರ: ಪ್ರೀತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ (Camarajanagara) ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ವರ್ಷಾ (22) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದನ್ನೂ ಓದಿ: ಬೆಂಗಳೂರು | ಇಂದಿನಿಂದ ಪ್ರಮುಖ ಫ್ಲೈಓವರ್‌ಗಳಲ್ಲಿ ಕೆಲ ವಾಹನಗಳ ಸಂಚಾರಕ್ಕೆ ನಿರ್ಬಂಧ

ಮೃತ ವರ್ಷಾ ಮೈಸೂರಿನಲ್ಲಿ ಬಿ.ಇ ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ವರ್ಷಾಳ ತಾಯಿ ನಾಗರತ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಸದ್ಯ ಕೇಸ್ ದಾಖಲಿಸಿಕೊಂಡಿರುವ ಯಳಂದೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಮಧ್ಯೆ ಸೆ.5ಕ್ಕೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ
