ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿ (Whitefield) ನಡೆದಿದೆ.
ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ದುರ್ಮರಣ
ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಪ್ರಮೋಷನ್ ನೀಡುವುದಾಗಿ 50 ಸಾವಿರ ರೂ. ಲಂಚ – ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ
