ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

Public TV
1 Min Read
Mysuru 2

ಮೈಸೂರು: ಸಿನಿಮಾ ಕಥೆಯ ಮಾದರಿ ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿ, ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

Mysuru 1 1

ನಂಜನಗೂಡು ತಾಲೂಕು ಹರತಲೆ ಗ್ರಾಮದ ಯುವತಿ ಹಲ್ಲರೆ ಗ್ರಾಮದ ಮಹೇಂದ್ರ ಎಂಬವರನ್ನು ಕಳೆದ ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ನಂತರ ಡಿಸೆಂಬರ್ 8 ರಂದು ಮದುವೆಯಾಗಿದ್ದಾರೆ. ನಂತರ ನಂಜನಗೂಡಿನ ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ತಮ್ಮ ವಿವಾಹವನ್ನ ನೊಂದಾಯಿಸಿಕೊಳ್ಳಲು ಬಂದಿದ್ದಾರೆ. ನೋಂದಣಿ ಪ್ರಕ್ರಿಯೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆಯೇ ಯುವತಿ ತಂದೆ ಬಸವರಾಜ ನಾಯ್ಕ್ ಪ್ರತ್ಯಕ್ಷವಾಗಿ ಮಗಳ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಹಾಕಿ ಜುಟ್ಟು ಹಿಡಿದು ಮನೆಗೆ ಕರೆದುಕೊಂಡು ಹೋಗಲು ಯತ್ನಿಸಿದ್ದಾರೆ. ಇದನ್ನೂ ಓದಿ: ಕಾಲೇಜಿಗೆ ಹೋಗುವಾಗ ಜಡೆ ಎಳೆದು, ಅಶ್ಲೀಲ ಮಾತುಗಳನ್ನಾಡಿ ಕಿರುಕುಳ- ವಿದ್ಯಾರ್ಥಿನಿ ಆತ್ಮಹತ್ಯೆ

forcefull marriage 2

ಈ ವೇಳೆ ಸಾರ್ವವನಿಕರು ಮಧ್ಯೆ ಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ ಮತ್ತು ಯುವತಿ ತನ್ನ ತಂದೆಯಿಂದಲೇ ತನಗೆ ರಕ್ಷಣೆ ಬೇಕೆಂದು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮನೆಗೆ ತಡವಾಗಿ ಬಂದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದೇ ತಪ್ಪಾಯ್ತು!

Share This Article