ಕಲಬುರಗಿ/ಯಾದಗಿರಿ: ಯುವತಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಕಂಚಗಾರಹಳ್ಳಿ ಕ್ರಾಸ್ ಬಳಿ ನಡೆದಿದೆ.
ಸವಿತಾ ರಾಠೋಡ್ (35) ಕೊಲೆಯಾದ ಮೃತ ದುರ್ದೈವಿ. ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡದ ನಿವಾಸಿಯಾಗಿರುವ ಈಕೆಯ ಯುವತಿಯ ಕುತ್ತಿಗೆ ಹಾಗೂ ಕಿವಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಮುಂಬೈ-ಗುವಾಹಟಿ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕ ಅರೆಸ್ಟ್
Advertisement
Advertisement
ಹೆತ್ತವರು ಇಲ್ಲದ ಕಾರಣ ವಿಕಲಚೇತನ ಸಹೋದರನ ಜೊತೆ ವಾಸವಾಗಿದ್ದ ಸವಿತಾ, ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಅಂತೆಯೇ ಎಂದಿನಂತೆ ಶನಿವಾರ ಕೂಡ ತನ್ನ ಜಮೀನಿಗೆ ಕೆಲಸ ಮಾಡಲು ಹೋದಾಗ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.
Advertisement
ಚಾಕುವಿನಿಂದ ಇರಿದು ಬಿಸಾಕಿದ್ದ ಸವಿತಾಳನ್ನ ಗ್ರಾಮಸ್ಥರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ನಸುಕಿನ ಜಾವ ಚಿಕಿತ್ಸೆ ಫಲಿಸದೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ
Advertisement
ಸಚಿನ್ ಎಂಬ ಯುವಕ ಕೊಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories