ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 22 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ.
ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಬಸ್ ನಲ್ಲಿ ಬಂದು ಯುವತಿ ಇಳಿದಿದ್ದಳು. ಬಸ್ ನಿಲ್ದಾಣದಿಂದ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಸ್ಥಳೀಯ ನಿವಾಸಿ ಆಕೆಯ ಮೈ ಮೇಲೆ ಕೈ ಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಒಂದೇ ಮನೆಯ ಮೂವರು ಹೆಣ್ಣುಮಕ್ಕಳ ಕೊಲೆ
ಅಲ್ಲದೆ ಯುವತಿಯನ್ನು ಏಕಾಏಕಿ ಹೊತ್ತುಕೊಂಡು ಹೋಗಲು ಯತ್ನಿಸಿದ್ದ. ಇದನ್ನು ನೋಡಿದ ಸ್ಥಳೀಯರು ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.