ಶಿವಮೊಗ್ಗ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸುವ ಸಲುವಾಗಿ ಶಿವಮೊಗ್ಗದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ಕಳುಹಿಸಲಾಯಿತು.
ಜಿಲ್ಲೆಯ ಭದ್ರಾವತಿಯ ಯುವತಿ ರಾಧಿಕಾ (18) ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ನಗರದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದ ಕಾರಣ ವೈದ್ಯರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರೆಫರ್ ಮಾಡಿದ್ದರು. ಇದನ್ನೂ ಓದಿ: ಹಣಕ್ಕಾಗಿ ಮೊಮ್ಮಗಳನ್ನೇ ಮಾರಾಟ ಮಾಡಿದ ಪಾಪಿ ಅಜ್ಜ
ತುರ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಬೇಕಿದ್ದರಿಂದ ರಾಧಿಕಾ ಪೋಷಕರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಪೋಷಕರ ಮನವಿಗೆ ತಕ್ಷಣವೇ ಸ್ಪಂದಿಸಿದ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದರು. ಹಾಗಾಗಿ ಇಂದು ಮಧ್ಯಾಹ್ನ 2.30ರ ಸುಮಾರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಅಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು.