DistrictsKarnatakaLatestLeading NewsMain PostShivamogga

ಮದುವೆಗೆ ಅಡ್ಡಿಯಾಯ್ತು ಕುಜ ದೋಷ – ಮಹಿಳಾ ಪೊಲೀಸ್ ಬಲಿ

Advertisements

ಶಿವಮೊಗ್ಗ: ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿ ಸುಧಾ.  ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಇದನ್ನೂ ಓದಿ: ಹಿಜಬ್ ಧರಿಸದಿದ್ದರೆ ಮಹಿಳೆಯರು ಪ್ರಾಣಿಗಳಂತೆ ಕಾಣ್ತಾರೆ: ತಾಲಿಬಾನ್

ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು. ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು.

ಅಲ್ಲದೇ ಯುವತಿ ಸುಧಾಳಿಗೂ ಫೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು. ಈ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಆವಾಜ್ ಕೂಡ ಹಾಕಿದ್ದರಂತೆ. ಇದರಿಂದ ಮನನೊಂದ ಪ್ರೇಮಿಗಳು ಮೇ.31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೂ ಓದಿ: ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್

ನಂತರ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Live Tv

Leave a Reply

Your email address will not be published.

Back to top button