ಲಕ್ನೋ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಿಗೆ ಕರೆಕೊಟ್ಟಿದ್ದಾರೆ.
ಅಮಿತ್ ಶಾ ಅವರು ಟ್ವಿಟ್ಟರ್ ನಲ್ಲಿ, ಇಂದು ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನವಾಗಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯೊಂದಿಗೆ ಭದ್ರತೆ, ಗೌರವ ಮತ್ತು ಉತ್ತಮ ಆಡಳಿತ ನೀಡುವ ಸರ್ಕಾರವನ್ನು ಆಯ್ಕೆ ಮಾಡಬೇಕು. ಈ ಹಂತದ ಮತದಾನದಲ್ಲಿ ನನ್ನ ಎಲ್ಲ ಸಹೋದರ ಸಹೋದರಿಯರು ನಮ್ಮ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ನಿಮ್ಮ ಒಂದು ಮತವು ಉತ್ತರಪ್ರದೇಶದ ಉಜ್ವಲ ಭವಿಷ್ಯದ ಆಧಾರವಾಗಿದೆ ಎಂದು ಟ್ವೀಟ್‍ನಲ್ಲಿ ಮಾಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ
Advertisement
आज उत्तर प्रदेश में प्रथम चरण का मतदान है। मैं इस चरण के सभी भाइयों-बहनों से अपील करता हूँ कि प्रदेश में विकास के साथ-साथ आपको सुरक्षा, सम्मान व सुशासन देने वाली सरकार को चुनने के लिए अधिक से अधिक संख्या में मतदान करें।
आपका एक वोट उत्तर प्रदेश के उज्ज्वल भविष्य का आधार है।
— Amit Shah (@AmitShah) February 10, 2022
Advertisement
ಉತ್ತರಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.
Advertisement
ಮಥುರಾ, ಮುಜಾಫರ್‍ನಗರ, ಮೀರತ್, ಗಾಜಿಯಾಬಾದ್, ಬುಲಂದ್‍ಶಹರ್, ಹಾಪುರ್, ಶಾಮ್ಲಿ, ಬಾಗ್‍ಪತ್, ಅಲಿಗಢ್, ಆಗ್ರಾ ಮತ್ತು ಗೌತಮ್ ಬುದ್ಧ ನಗರ ಜಿಲ್ಲೆಗಳಲ್ಲಿ ಇಂದು ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಸುಮಾರು 2.27 ಕೋಟಿ ಮತದಾರರು ಈ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
Advertisement
ಪಶ್ಚಿಮ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 412 ಕಂಪನಿಗಳ ಕೇಂದ್ರೀಯ ಅರೆಸೇನಾ ಪಡೆಗಳ ಸುಮಾರು 50,000 ಸಿಬ್ಬಂದಿಯನ್ನು ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಶುಭ ಸುದ್ದಿ – ಅಂತಿಮ ಹಂತದಲ್ಲಿದೆ 5ಜಿ ನೆಟ್ವರ್ಕ್
ಇಂದು ಮತದಾನ ನಡೆಯಲಿರುವ 58 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿ ಕಾಪಾಡಲು ಪೊಲೀಸರು ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.