Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • November 2026
  • October 2026
  • September 2026
  • August 2026
  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • ಟ್ರೆಂಡಿಂಗ್ ನ್ಯೂಸ್ ( Trending News )
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: ಯುವಕರೇ ದೇಶದ ಶಕ್ತಿ, ದೇಶವನ್ನು ಕಟ್ಟುವ ಸಾಮರ್ಥ್ಯ ಯುವಜನತೆಯಲ್ಲಿದೆ: ಪರಮೇಶ್ವರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Districts | Tumakuru | ಯುವಕರೇ ದೇಶದ ಶಕ್ತಿ, ದೇಶವನ್ನು ಕಟ್ಟುವ ಸಾಮರ್ಥ್ಯ ಯುವಜನತೆಯಲ್ಲಿದೆ: ಪರಮೇಶ್ವರ್

Tumakuru

ಯುವಕರೇ ದೇಶದ ಶಕ್ತಿ, ದೇಶವನ್ನು ಕಟ್ಟುವ ಸಾಮರ್ಥ್ಯ ಯುವಜನತೆಯಲ್ಲಿದೆ: ಪರಮೇಶ್ವರ್

Last updated: November 29, 2026 4:02 pm
By
Public TV
Share
9 Min Read
Tumakuru Yuva Janotsava G Parameshwar

– ತುಮಕೂರಿನಲ್ಲಿ ರಾಜ್ಯ ಮಟ್ಟದ ಯುವ ಜನೋತ್ಸವ ಉದ್ಘಾಟಿಸಿದ ಡಿಸಿಎಂ 
– ತುಮಕೂರನ್ನು ಕೈಗಾರಿಕಾ ಕೇಂದ್ರವನ್ನಾಗಿಸಿ ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವ ಸಂಕಲ್ಪ 

ತುಮಕೂರು: ಯುವಕರೇ (Youths) ದೇಶದ ಶಕ್ತಿ. ದೇಶವನ್ನು ಕಟ್ಟುವ ಮತ್ತು ಮುನ್ನಡೆಸುವ ಸಾಮರ್ಥ್ಯ ಯುವಜನತೆಯಲ್ಲಿದೆ. ಯುವಕರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸಿ, ಅವರಲ್ಲಿ ನಾಯಕತ್ವದ ಗುಣ, ಕೌಶಲ್ಯ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮೂಲಕ ದೇಶದ ಭವಿಷ್ಯವನ್ನು ರೂಪಿಸಬೇಕಿದೆ ಎಂದು ಉಪಮುಖ್ಯಮಂತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದರು.

ತುಮಕೂರು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಅಮಾನಿಕೆರೆ ಆವರಣದಲ್ಲಿರುವ ಗಾಜಿನಮನೆಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಯುವಜನೋತ್ಸವ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಬಿಸಿಲು ಮಾರಮ್ಮನ ದರ್ಶನ ಪಡೆದ ನಿಖಿಲ್‌ – ಪ್ರವೇಶ ನಿರಾಕರಿಸಿದ್ದ ಊರಲ್ಲಿ ಅದ್ಧೂರಿ ಸ್ವಾಗತ

ಯುವಜನೋತ್ಸವದಂತಹ ಕಾರ್ಯಕ್ರಮಗಳು ಯುವಕರಿಗೆ ನಾಡಿನ ಇತಿಹಾಸ, ಸಾಹಿತ್ಯ, ಕ್ರೀಡೆ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವುದರ ಜೊತೆಗೆ ಅವರಲ್ಲಿ ರಾಷ್ಟ್ರೀಯ ಮನೋಭಾವನೆ, ನಾಯಕತ್ವದ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ. ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

More Read

NIKHIL KUMARASWAMY
ಬಿಸಿಲು ಮಾರಮ್ಮನ ದರ್ಶನ ಪಡೆದ ನಿಖಿಲ್‌ – ಪ್ರವೇಶ ನಿರಾಕರಿಸಿದ್ದ ಊರಲ್ಲಿ ಅದ್ಧೂರಿ ಸ್ವಾಗತ
modi speech in lok sabha
ಪಕ್ಷದ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿ ಮುಖ್ಯ, ಮಹಿಳಾ ಮೀಸಲಾತಿ ಬಿಲ್‌ ಇಂದಿನ ಅಗತ್ಯ: ಪ್ರಧಾನಿ ಮೋದಿ
MK Stalin House
ಸ್ಟಾಲಿನ್ ಭೇಟಿಗೆ ಏರ್‌ಪೋರ್ಟ್‌ನಲ್ಲೇ ಕಾದು ಕುಳಿತ ‘ಕೈ’ ನಾಯಕರು

Tumakuru Yuva Janotsava G Parameshwar 2

ಯುವಜನತೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಡಿಜಿಟಲ್ ಸಾಕ್ಷರತೆ, ಮಾದಕವಸ್ತುಗಳ ದುರುಪಯೋಗದ ಕುರಿತು ಅರಿವು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ನಾಯಕತ್ವದ ಗುಣ ಹೊಂದಿರುವ ಯುವಕರಿಗೆ ಅವಕಾಶಗಳನ್ನು ಕಲ್ಪಿಸಬೇಕು. ಸಮಾಜದ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸಾಮಾಜಿಕ ನಾಯಕತ್ವವನ್ನೂ ಬೆಳೆಸಬೇಕು ಎಂದು ಹೇಳಿದರು.

ರಾಷ್ಟ್ರೀಯ ಏಕತೆ ನಮ್ಮೆಲ್ಲರ ಜವಾಬ್ದಾರಿ:
ರಾಷ್ಟ್ರೀಯ ಏಕತೆ ಮತ್ತು ರಾಷ್ಟ್ರೀಯ ಮನೋಭಾವನೆ ಇಂದಿನ ಸಂದರ್ಭದಲ್ಲಿ ಅತ್ಯಂತ ಮುಖ್ಯವಾಗಿವೆ. ದೇಶವನ್ನು ಮತ್ತು ಸಮಾಜವನ್ನು ಒಡೆಯುವ ಶಕ್ತಿಗಳು ಯಾವಾಗಲೂ ಇರುತ್ತವೆ. ಅಂತಹ ಶಕ್ತಿಗಳನ್ನು ಮೆಟ್ಟಿ ನಿಂತು ಭಾರತೀಯತೆ ಮತ್ತು ರಾಷ್ಟ್ರೀಯತೆಯನ್ನು ಉಳಿಸಿ ಬೆಳೆಸುವುದು ಯುವಜನತೆಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಭಾರತದಲ್ಲಿ ವಿವಿಧ ಭಾಷೆಗಳು, ಸಂಸ್ಕೃತಿಗಳು, ಉಡುಪುಗಳು ಮತ್ತು ಆಹಾರ ಪದ್ಧತಿಗಳಿವೆ. ವಿವಿಧ ಜಾತಿ ಮತ್ತು ಧರ್ಮಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಆದರೆ ನಾವೆಲ್ಲರೂ ಭಾರತೀಯರು ಎಂಬ ಭಾವನೆ ನಮ್ಮಲ್ಲಿ ಇರಬೇಕು. ವಿದೇಶಗಳಿಗೆ ಹೋದಾಗ ನಮ್ಮನ್ನು ಮೊದಲು ಭಾರತೀಯರೆಂದೇ ಗುರುತಿಸುತ್ತಾರೆ. ನಂತರವೇ ನಮ್ಮ ರಾಜ್ಯ, ಊರು ಮತ್ತು ಇತರ ವಿವರಗಳನ್ನು ಕೇಳುತ್ತಾರೆ. ಈ ಕಾರಣದಿಂದ ರಾಷ್ಟ್ರೀಯ ಏಕತೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಸಂವಿಧಾನ ರಚನೆಯ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಧರ್ಮ ಅಥವಾ ಜಾತಿಯವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳಲಿಲ್ಲ. ಪ್ರತಿಯೊಬ್ಬರೂ ತಮ್ಮ ನಂಬಿಕೆ ಮತ್ತು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯವನ್ನು ಸಂವಿಧಾನದಲ್ಲಿ ಒದಗಿಸಿದ್ದಾರೆ. “You are free to practice your religion. You are free to practice your faith” ಎಂಬುದನ್ನು ಸ್ಮರಿಸಿದ ಅವರು, ಇಂತಹ ವೈವಿಧ್ಯತೆಯ ನಡುವೆಯೂ ನಾವೆಲ್ಲರೂ ಒಂದೇ ಎಂಬ ರಾಷ್ಟ್ರೀಯ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

Tumakuru Yuva Janotsava G Parameshwar 3

ಸ್ವಾಮಿ ವಿವೇಕಾನಂದರ ಆಶಯದಂತೆ ಯುವಕರಿಗೆ ಅವಕಾಶ ಕಲ್ಪಿಸಬೇಕು:
ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮದಿನ. ಇದು ಯುವಜನತೆಗೆ ಅತ್ಯಂತ ಮಹತ್ವದ ದಿನವಾಗಿದೆ. ಸ್ವಾಮಿ ವಿವೇಕಾನಂದರು ಇಡೀ ವಿಶ್ವದ ಯುವಜನತೆಗೆ ಸಂದೇಶ ನೀಡಿದವರು. ಭಾರತದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಅವರು, ದೇಶವನ್ನು ಕಟ್ಟುವ ಮತ್ತು ಮುನ್ನಡೆಸುವ ಶಕ್ತಿ ಯುವಕರಲ್ಲಿದೆ ಎಂದು ಸಾರಿದ್ದರು. ಅವರ ಆಶಯದಂತೆ ಯುವಕರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ದೇಶದ ಜನಸಂಖ್ಯೆಯಲ್ಲಿ ಸುಮಾರು ಶೇ.60ರಷ್ಟು ಮಂದಿ 18ರಿಂದ 35 ವರ್ಷದೊಳಗಿನವರಿದ್ದಾರೆ. ಇಂದಿನ ಯುವಜನತೆಯನ್ನು ಜೆನ್ ಜಿ ಸೇರಿದಂತೆ ವಿವಿಧ ಹೆಸರಿನಿಂದ ಗುರುತಿಸಲಾಗುತ್ತಿದೆ. ಯುವಕರನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವುದು, ಅವರ ಭವಿಷ್ಯವನ್ನು ರೂಪಿಸುವುದು ಮತ್ತು ಅವರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ಅಗತ್ಯ ಮಾರ್ಗದರ್ಶನ ನೀಡುವುದು ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

ಉದ್ಯೋಗಾವಕಾಶಗಳ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ:
ಭಾರತದಲ್ಲಿ ಪ್ರತಿವರ್ಷ ಸುಮಾರು 1.20 ಕೋಟಿ ಪದವೀಧರರು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಂದ ಹೊರಬರುತ್ತಿದ್ದಾರೆ. ಇವರಲ್ಲಿ ಸುಮಾರು 24 ಲಕ್ಷ ಮಂದಿ ಬಿ.ಎ., 12 ಲಕ್ಷ ಮಂದಿ ಬಿ.ಎಸ್ಸಿ., 12 ಲಕ್ಷ ಮಂದಿ ಬಿ.ಕಾಂ. ಹಾಗೂ ಸುಮಾರು 10 ಲಕ್ಷ ಮಂದಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೋರ್ಸ್‌ಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಆದರೆ ಇವರಲ್ಲಿ ಕೇವಲ ಶೇ.40ರಷ್ಟು ಮಂದಿಗೆ ಮಾತ್ರ ಉದ್ಯೋಗ ದೊರೆಯುತ್ತಿದ್ದು, ಉಳಿದ ಶೇ.60ರಷ್ಟು ಮಂದಿ ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿಸಿದರು.

Tumakuru Yuva Janotsava G Parameshwar 5

ಪ್ರತಿವರ್ಷ ಉದ್ಯೋಗ ಸಿಗದೆ ಉಳಿಯುವ ಪದವೀಧರರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಹತ್ತು ವರ್ಷಗಳಲ್ಲಿ ಕೋಟ್ಯಂತರ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಇದು ಸರ್ಕಾರ ಮತ್ತು ಸಮಾಜಕ್ಕೆ ದೊಡ್ಡ ಸವಾಲಾಗಿದೆ. ದೇಶದಲ್ಲಿ ನಿರುದ್ಯೋಗದ ಪ್ರಮಾಣ ಶೇ.6ರಷ್ಟಿದ್ದರೂ, ಪ್ರತಿವರ್ಷ ಉದ್ಯೋಗ ಸಿಗದೆ ಉಳಿಯುವವರ ಸಂಖ್ಯೆಯನ್ನು ಗಮನಿಸಿದಾಗ ನಿರುದ್ಯೋಗದ ಸಮಸ್ಯೆಯ ಗಂಭೀರತೆ ಅರ್ಥವಾಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ 2023ರಿಂದ ನಮ್ಮ ಸರ್ಕಾರ ಉದ್ಯೋಗಾವಕಾಶಗಳ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಿದೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಯೂ ಈ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ಈಗಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವ ಹಾಗೂ ಅವರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ಪ್ರಯತ್ನಗಳು ಮುಂದುವರಿದಿವೆ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷದ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿ ಮುಖ್ಯ, ಮಹಿಳಾ ಮೀಸಲಾತಿ ಬಿಲ್‌ ಇಂದಿನ ಅಗತ್ಯ: ಪ್ರಧಾನಿ ಮೋದಿ

ಕೇವಲ ಪದವಿ ಪಡೆದರೆ ಉದ್ಯೋಗ ದೊರೆಯುವುದಿಲ್ಲ. ಯುವಕರಿಗೆ ಅಗತ್ಯ ಕೌಶಲ್ಯಗಳನ್ನು ಕಲಿಸುವುದು, ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುವುದು ಹಾಗೂ ಉದ್ಯಮಶೀಲತೆಯ ಮನೋಭಾವ ಬೆಳೆಸುವುದು ಮುಖ್ಯವಾಗಿದೆ. ಯುವಕರು ಸ್ವಯಂ ಉದ್ಯೋಗಿಗಳಾಗುವಂತೆ ಸಿದ್ಧಪಡಿಸಿದರೆ ನಿರುದ್ಯೋಗದ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಈ ದೃಷ್ಟಿಯಿಂದ ಯುವಕರ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ:
ಕರ್ನಾಟಕ ಸರ್ಕಾರ ಪ್ರತಿವರ್ಷ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸುತ್ತಿದೆ. 2027ರ ಏಪ್ರಿಲ್‌ನಲ್ಲಿಯೂ ಮತ್ತೊಂದು ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಬೆಂಗಳೂರಿಗೆ ಮಾತ್ರವಲ್ಲದೆ, ಬೆಳಗಾವಿ, ಬೀದರ್, ಹುಬ್ಬಳ್ಳಿ-ಧಾರವಾಡ, ಹಾಸನ, ಮಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುವ ಉದ್ಯಮಿಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಹೇಳಿದರು.

ಕಳೆದ ವರ್ಷದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 10.56 ಲಕ್ಷ ಕೋಟಿ ರೂ. ಹೂಡಿಕೆಗೆ ಸಂಬಂಧಿಸಿದ ಒಪ್ಪಂದಗಳು ನಡೆದಿವೆ. ಇತರ ರಾಜ್ಯಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳು ಕರ್ನಾಟಕವನ್ನು ಆಯ್ಕೆ ಮಾಡಿಕೊಳ್ಳುತ್ತಿವೆ. ಕಳೆದ ವರ್ಷ ಸುಮಾರು 6.5 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, ಇದರೊಂದಿಗೆ ಲಕ್ಷಾಂತರ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಸರ್ಕಾರದ ನೀತಿಗಳಿಂದ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಪ್ರಯತ್ನಗಳು ಸಾಕಾರಗೊಳ್ಳುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ವರ್ಷವೂ ಮತ್ತೊಂದು ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದ್ದು, ಅದರ ಮೂಲಕವೂ ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಸಾಫ್ಟ್‌ವೇರ್ ಮತ್ತು ಇತರ ತಂತ್ರಜ್ಞಾನ ಕ್ಷೇತ್ರಗಳ ಕಂಪನಿಗಳು ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪನೆಯಾಗುತ್ತಿವೆ ಎಂದರು.

ತುಮಕೂರಿಗೆ ಕೈಗಾರಿಕೆಗಳನ್ನು ತರುವ ಸಂಕಲ್ಪ:
ತುಮಕೂರು ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಜಿಲ್ಲೆಗೆ ಕೈಗಾರಿಕೆಗಳನ್ನು ತರಲು ಪಣ ತೊಟ್ಟಿದ್ದೇನೆ. ಈಗಾಗಲೇ ಹಲವು ಕೈಗಾರಿಕೆಗಳು ಜಿಲ್ಲೆಗೆ ಬರಲು ಮುಂದಾಗಿವೆ. ಗ್ರೀನ್ ಹೈಡ್ರೋಜನ್ ಮತ್ತು ಡೇಟಾ ಬ್ಯಾಂಕ್ ಕ್ಷೇತ್ರದಲ್ಲಿ ಸುಮಾರು 35 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆ ಇದೆ. ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಉಪಕರಣಗಳು, ಮದ್ದುಗುಂಡುಗಳು ಮತ್ತು ಕ್ಷಿಪಣಿಗಳ ತಯಾರಿಕೆಗೂ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಇತ್ತೀಚೆಗೆ ಮುಖ್ಯಮಂತ್ರಿ ಹಾಗೂ ಕಂಪನಿಯ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ತುಮಕೂರಿಗೆ ಮೆಟ್ರೋ ರೈಲು ತರಬೇಕೆಂಬ ಪ್ರಯತ್ನ ಹಲವು ವರ್ಷಗಳಿಂದ ನಡೆಯುತ್ತಿದೆ. ಈಗಾಗಲೇ ಇದರ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಇತ್ತೀಚೆಗೆ ವಿದೇಶಿ ಹೂಡಿಕೆದಾರರು ತುಮಕೂರಿಗೆ ಬಂದು ಬಂಡವಾಳ ಹೂಡಲು ಆಸಕ್ತಿ ತೋರಿದ್ದು, ಈ ಪ್ರಸ್ತಾವನೆಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಹೇಳಿದರು.

ಯುವಕರು ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಅವಕಾಶಗಳನ್ನು ಕಲ್ಪಿಸುವುದು, ಸಮಾಜದ ಜವಾಬ್ದಾರಿಯನ್ನು ಹೊತ್ತುಕೊಳ್ಳುವಂತೆ ಮಾಡುವುದು ಮತ್ತು ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಅತ್ಯಂತ ಪ್ರಮುಖವಾಗಿದೆ ಎಂದರು. ಇದನ್ನೂ ಓದಿ: ಸ್ಟಾಲಿನ್ ಭೇಟಿಗೆ ಏರ್‌ಪೋರ್ಟ್‌ನಲ್ಲೇ ಕಾದು ಕುಳಿತ ‘ಕೈ’ ನಾಯಕರು

1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ದೇಶದ ಸಾಕ್ಷರತಾ ಪ್ರಮಾಣ ಕೇವಲ ಶೇ.12ರಷ್ಟಿತ್ತು. ಇಂದು ಇಷ್ಟು ದೊಡ್ಡ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಶೇ.80ರಷ್ಟು ಜನರು ಅಕ್ಷರಸ್ಥರಾಗಿದ್ದಾರೆ. ಇದು ಸಾಮಾನ್ಯ ಸಾಧನೆಯಲ್ಲ. ರಾಜಕೀಯದಲ್ಲಿ ಟೀಕೆ-ಟಿಪ್ಪಣಿಗಳು ಸಹಜ. ಆದರೆ ಅಭಿವೃದ್ಧಿಯ ದೃಷ್ಟಿಯಿಂದ ಭಾರತ ವೇಗವಾಗಿ ಮುನ್ನಡೆಯುತ್ತಿದೆ ಎಂಬುದನ್ನು ಯುವಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

Tumakuru Yuva Janotsava G Parameshwar 4

ಇತ್ತೀಚೆಗೆ ಸಿದ್ಧಾರ್ಥ ಸಂಸ್ಥೆಯಲ್ಲಿ ಇಸ್ರೋ ಅಧ್ಯಕ್ಷರು ಮಾತನಾಡುವ ಸಂದರ್ಭದಲ್ಲಿ ಚಂದ್ರಯಾನದ ಯಶಸ್ಸಿನ ಕುರಿತು ವಿವರಿಸಿದ್ದರು. ಚಂದ್ರಯಾನ ಚಂದ್ರನ ಮೇಲೆ ಇಳಿಯಲು ನಡೆದ ತಯಾರಿ ಮತ್ತು ಅದರಲ್ಲಿ ತೊಡಗಿಸಿಕೊಂಡಿದ್ದ ವಿಜ್ಞಾನಿಗಳ ಶ್ರಮವನ್ನು ಅವರು ವಿವರಿಸಿದ್ದರು. ಚಂದ್ರಯಾನಕ್ಕೆ ಅಗತ್ಯವಿರುವ ಎಂಜಿನ್‌ನ ಭಾಗಗಳನ್ನು ತುಮಕೂರಿನಲ್ಲಿಯೂ ತಯಾರಿಸಲಾಗಿದ್ದು, ಇಲ್ಲಿ ತಯಾರಾದ ಭಾಗಗಳು ಚಂದ್ರಯಾನದಲ್ಲಿ ಬಳಕೆಯಾಗಿವೆ. ತುಮಕೂರಿನಲ್ಲಿಯೇ ತಯಾರಾದ ಭಾಗ ಚಂದ್ರನ ಮೇಲೆ ಇಳಿದಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಭಾರತಕ್ಕೆ ಇಂತಹ ಸಾಮರ್ಥ್ಯವಿದೆ ಎಂಬುದನ್ನು ಯುವಕರು ಸ್ಮರಿಸಬೇಕು ಎಂದರು.

ಬಸವಣ್ಣನವರ ಸಮಾನತೆಯ ಸಂದೇಶವನ್ನು ಯುವಕರು ಪಾಲಿಸಬೇಕು:
ಕರ್ನಾಟಕದ ಪರಂಪರೆ ಬಹಳ ದೊಡ್ಡದು. ಅನೇಕ ಮಹಾಪುರುಷರು ಈ ನಾಡಿನಲ್ಲಿ ಜನಿಸಿ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸುಮಾರು 850 ವರ್ಷಗಳ ಹಿಂದೆ ಬಸವಣ್ಣನವರು ಸಮಾನತೆಯ ಸಂದೇಶವನ್ನು ಸಾರಿದರು. ಸಮಾಜದಲ್ಲಿ ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸಬೇಕು ಎಂದು ಪ್ರತಿಪಾದಿಸಿದರು.

ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಪಾದಿಸಿದ ಸಮಾನತೆಯ ಆಶಯವನ್ನು ಬಸವಣ್ಣನವರು ಶತಮಾನಗಳ ಹಿಂದೆಯೇ ಸಾರಿದ್ದರು. ಕರ್ನಾಟಕವು ವೈವಿಧ್ಯಮಯ ಪರಂಪರೆಯನ್ನು ಹೊಂದಿರುವ ನಾಡು. ಈ ನಾಡನ್ನು ಕಟ್ಟಿ ಬೆಳೆಸಿ ಮುಂದಿನ ಪೀಳಿಗೆಗೆ ಶಾಂತಿಯ ತೋಟವನ್ನಾಗಿ ಮಾಡಬೇಕು. ಯುವಜನತೆ ಈ ಆಶಯವನ್ನು ಅರ್ಥಮಾಡಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಯುವಕರನ್ನು ಒಗ್ಗೂಡಿಸಲು ಭಾರತ್ ಜೋಡೋ ಸಂಘಗಳು:
ರಾಹುಲ್ ಗಾಂಧಿ ಅವರು ದೇಶವನ್ನು ಒಗ್ಗೂಡಿಸುವ ಉದ್ದೇಶದಿಂದ ಸುಮಾರು 3,600 ಕಿಲೋಮೀಟರ್ ಪಾದಯಾತ್ರೆ ನಡೆಸಿ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದರು. ರಾಜ್ಯದಲ್ಲಿಯೂ ಯುವಕರನ್ನು ಒಗ್ಗೂಡಿಸುವ ಉದ್ದೇಶದಿಂದ ಭಾರತ್ ಜೋಡೋ ಸಂಘಗಳನ್ನು ಸ್ಥಾಪಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ವಿವಿಧ ಭಾಷೆ, ಜಾತಿ ಮತ್ತು ಸಮುದಾಯಗಳಿಗೆ ಸೇರಿದ ಯುವಕರನ್ನು ಒಂದೆಡೆ ಸೇರಿಸಿ ಅವರಲ್ಲಿ ಒಗ್ಗಟ್ಟು ಬೆಳೆಸಬೇಕು ಎಂಬ ಉದ್ದೇಶದಿಂದ ಈ ಸಂಘಗಳನ್ನು ರಚಿಸಲಾಗಿದೆ. ಇದಕ್ಕಾಗಿ 1,000 ಕೋಟಿ ರೂ. ಮೀಸಲಿಡಲಾಗಿದ್ದು, ಈಗಾಗಲೇ ಸುಮಾರು 10 ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಬದುಕಿರುವ ವ್ಯಕ್ತಿಗಳ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ವಿತರಣೆ ಆರೋಪ – ದಾಖಲೆ ನಿರ್ವಹಿಸುತ್ತಿದ್ದ ಅಧಿಕಾರಿ ಅಮಾನತು

ಪ್ರತಿ ಸಂಘಕ್ಕೆ ವರ್ಷಕ್ಕೆ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಈ ಹಣವನ್ನು ಸಾಹಿತ್ಯ, ಸಂಸ್ಕೃತಿ, ನಾಟಕ, ಬೀದಿ ನಾಟಕ, ಕ್ರೀಡೆ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು. ಯುವಕರಲ್ಲಿ ಸಾಮಾಜಿಕ ಜವಾಬ್ದಾರಿ, ಸಾಂಸ್ಕೃತಿಕ ಅರಿವು ಮತ್ತು ರಾಷ್ಟ್ರೀಯ ಮನೋಭಾವನೆ ಬೆಳೆಸುವುದು ಈ ಸಂಘಗಳ ಉದ್ದೇಶವಾಗಿದೆ ಎಂದು ಹೇಳಿದರು.

ಯುವಜನೋತ್ಸವದಲ್ಲಿ ಭಾಗವಹಿಸುವ ಯುವಕರಿಗೆ ಶುಭಾಶಯ:
ತುಮಕೂರು ಆತಿಥ್ಯಕ್ಕೆ ಹೆಸರಾಗಿರುವ ಜಿಲ್ಲೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಯುವಕರನ್ನು ಜಿಲ್ಲಾಡಳಿತ ಉತ್ತಮವಾಗಿ ನೋಡಿಕೊಳ್ಳಲಿದೆ. ಯುವಕರ ಯೋಗಕ್ಷೇಮ ನಮಗೆ ಬಹಳ ಮುಖ್ಯ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಇಲ್ಲಿಂದ ಹೊಸ ಅನುಭವ, ಜ್ಞಾನ ಮತ್ತು ಕಲಿಕೆಯನ್ನು ಪಡೆದುಕೊಂಡು ಹೋಗಬೇಕು ಎಂದು ಹೇಳಿದರು.

ಈ ಯುವಜನೋತ್ಸವದಲ್ಲಿ ಉತ್ತಮ ಸಾಧನೆ ಮಾಡುವವರನ್ನು ಆಯ್ಕೆ ಮಾಡಿ, 2027ರ ಜನವರಿ 12ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಯುವಜನೋತ್ಸವದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಕಳುಹಿಸಲಾಗುವುದು. ರಾಜ್ಯದ ಯುವಕರು ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ಇದಾಗಿದೆ ಎಂದರು.

ಯುವಜನೋತ್ಸವವು ಯುವಕರಿಗೆ ಮತ್ತು ಸರ್ಕಾರಕ್ಕೆ ಸಮಾನವಾಗಿ ಮಹತ್ವದ ಕಾರ್ಯಕ್ರಮವಾಗಿದೆ. ಯುವಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜೊತೆಗೆ ಇತರ ಜಿಲ್ಲೆಗಳ ಯುವಕರೊಂದಿಗೆ ಬೆರೆತು ಹೊಸ ಅನುಭವಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಯುವಜನತೆಗಾಗಿ ಕ್ರೀಡೆ ಮತ್ತು ಸಬಲೀಕರಣ ಇಲಾಖೆಯಡಿ ಹಲವು ಕಾರ್ಯಕ್ರಮಗಳು:
ಸರ್ಕಾರ ರಚನೆಯ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಖಾತೆಯನ್ನು ತಮಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಯುವಕರೊಂದಿಗೆ ಇರಬೇಕು, ಅವರಿಗಾಗಿ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಈ ಖಾತೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಮುಂದಿನ ದಿನಗಳಲ್ಲಿ ಯುವಕರಿಗಾಗಿ ಹಾಗೂ ಕ್ರೀಡಾಪಟುಗಳಿಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಯುವಕರು ಈ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಜ.12, 13ಕ್ಕೆ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ಮಾರಿಜಾತ್ರಾ ಮಹೋತ್ಸವ

Share This Article
Facebook Whatsapp Whatsapp Telegram Copy Link
Cinema News
Rishab Shetty
IFFI 2026 Winners | ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದ ರಿಷಬ್
ramayana bahubali 2
ಭಾರತದಲ್ಲೇ 1,000 ಕೋಟಿ ಕಲೆಕ್ಷನ್‌; ಬಾಹುಬಲಿ 2 ಲೈಫ್‌ಟೈಮ್‌ ದಾಖಲೆ ಮುರಿದ ರಾಮಾಯಣ
Shah Rukh Khan Kareena Kapoor Daddy Cool
ದಶಕದ ಬಳಿಕ ಒಂದಾದ ಶಾರುಖ್ – ಕರೀನಾ: ‘ಡ್ಯಾಡಿ ಕೂಲ್’ ಹಾಡಲ್ಲಿ ಭರ್ಜರಿ ಡ್ಯಾನ್ಸ್‌
Mahaan 1
ಮಹಾನ್ ಚಿತ್ರದ ಅನ್ನದಾತರ ಬದುಕಿಗೆ ಧ್ವನಿಯಾದ ‘ನಾನೇ ನಾನೇ ರೈತ’ ಸಾಂಗ್ ರಿಲೀಸ್

You Might Also Like

Kolar Death Certificate Suspend

ಬದುಕಿರುವ ವ್ಯಕ್ತಿಗಳ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ವಿತರಣೆ ಆರೋಪ – ದಾಖಲೆ ನಿರ್ವಹಿಸುತ್ತಿದ್ದ ಅಧಿಕಾರಿ ಅಮಾನತು

36 minutes ago
MND Crime 2

ಸ್ನೇಹಿತನನ್ನೇ ಪ್ರೀತಿಸುವಂತೆ ರೌಡಿಶೀಟರ್ ಧಮ್ಕಿ, ಹಲ್ಲೆ ಆರೋಪ; ಮನನೊಂದು ಅಪ್ರಾಪ್ತೆ ಆತ್ಮಹತ್ಯೆ

45 minutes ago
alvekodi durgaparameshwari

ಜ.12, 13ಕ್ಕೆ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ಮಾರಿಜಾತ್ರಾ ಮಹೋತ್ಸವ

54 minutes ago
ASHA Workers 4

ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟಕ್ಕೆ ತೆರೆ: ಸರ್ಕಾರದ ಲಿಖಿತ ಆದೇಶ ಬೆನ್ನಲ್ಲೇ ಧರಣಿ ಅಂತ್ಯ

2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • POSH POLICY
  • Complaints Redressal
  • Terms and Conditions
  • Contact