ಮೈಸೂರು: ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ (Attempted Rape) ಆರೋಪದಡಿ ಯುವಕನೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
23 ವರ್ಷದ ಸುರೇಶ್ ಬಂಧಿತ ಆರೋಪಿ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಇದನ್ನೂ ಓದಿ: ಒಂದೇ ದಿನ ಚಿತ್ರದುರ್ಗದಲ್ಲಿ ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ
ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ತಿಳಿದ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ – ಗಂಭೀರ ಗಾಯ
