ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

Public TV
1 Min Read
PM Modi Post Viral in raichuru

ರಾಯಚೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ ಹಿನ್ನೆಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ (K Hosalli) ಗ್ರಾಮದ ಯುವಕ ಅಜ್ಮೀರ್ ಎಂದು ಗುರುತಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ನ್ನು ಹರಿಬಿಟ್ಟಿದ್ದ.

ಕುದುರೆ ಗಾಡಿಯೊಂದರ ಮೇಲೆ ಅಳುತ್ತಿರುವ ಪ್ರಧಾನಿ ಮೋದಿಯನ್ನು ಕೂರಿಸಿದ್ದು, ಅದರಲ್ಲಿ ರಫೆಲ್ ಯುದ್ಧ ವಿಮಾನವನ್ನು ತೆಗೆದುಕೊಂಡು ಹೋಗುತ್ತಿರುವ ರೀತಿಯಲ್ಲಿ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರು ಅಜ್ಮೀರ್‌ನನ್ನು ಬಂಧಿಸಿದ್ದಾರೆ.

ಸದ್ಯ ಈ ಸಂಬಂಧ ತುರವಿಹಾಳ ಪೊಲೀಸ್ ಠಾಣೆಯಲ್ಲಿ (Turvihal Police) ಎಫ್‌ಐಆರ್ ದಾಖಲಾಗಿದೆ.

Share This Article