ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಹಿನ್ನೆಲೆ ಕಳೆದ ಶುಕ್ರವಾರ ಮದ್ಯ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು.
Advertisement
Advertisement
ಹೀಗಿದ್ದರೂ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದ ದಿನ ಆದ್ಯಾಗೋ ಮದ್ಯಕೊಂಡ ಕೀಳು ಮನಸ್ಸಿನ ವ್ಯಕ್ತಿಯೊಬ್ಬ ಮದ್ಯ ಬಾಟಲಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವುದರ ಜೊತೆಗೆ, ರಾಜ್ ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ ಎಂದು ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್
Advertisement
Advertisement
ಈ ಪೋಸ್ಟ್ ವಿರುದ್ಧ ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪುತ್ರಿ ಸಾನ್ವಿ, ಕೇವಲ ಆಲ್ಕೋಹಾಲ್‍ಗಾಗಿ ಪುನೀತ್ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ? ಎಂದು ಸಾನ್ವಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಇಂಥ ನೋವು ಯಾರಿಗೂ ಬರಬಾರದು: ಶಿವರಾಜ್ ಕುಮಾರ್
ಈ ಹಿನ್ನಲೆ ನಗರ ಸೈಬರ್ ಪೊಲೀಸರು ಪೋಸ್ಟ್ ಹಿಂದೆ ಬಿದ್ದಿದ್ದರು. ಇದೀಗ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆರೋಪಿ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು