ಬೆಂಗಳೂರು: ಪ್ರಿಯತಮೆ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಆಕಸ್ಮಿಕವಾಗಿ ಅಡ್ಡಬಂದ ಯುವಕನಿಗೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಉತ್ತರಹಳ್ಳಿಯ ಅಕ್ಕಮ್ಮ ಬೆಟ್ಟದಲ್ಲಿ ನಡೆದಿದೆ.
ಜಬ್ಬಿ ಖಾನ್ ಹಲ್ಲೆಗೊಳಗಾದ ಯುವಕ. ಅಕ್ಕಮ್ಮ ಬೆಟ್ಟದಲ್ಲಿ ಪ್ರೇಯಸಿ ಜೊತೆ ಪ್ರಿಯಕರನೊಬ್ಬ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ಜಬ್ಬಿ ಖಾನ್ ಅಡ್ಡ ಬಂದಿದ್ದಾನೆ. ಇದರಿಂದ ಕುಪಿತಗೊಂಡ ಪ್ರಿಯಕರ ಮನಸ್ಸೋ ಇಚ್ಛೆ ಥಳಿಸಿದ್ದಾನೆ. ಬಳಿಕ ತನ್ನ 6 ಮಂದಿ ಸ್ನೇಹಿತರೊಂದಿಗೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಜಬ್ಬಿ ಖಾನ್ ಬಳಿಯಿದ್ದ ಪರ್ಸ್ ಹಾಗೂ ಮೊಬೈಲ್ ಅನ್ನು ಕಿತ್ತು ಕಳುಹಿಸಿದ್ದಾರೆ.
ಗಾಯಗೊಂಡ ಜಬ್ಬಿ ಖಾನ್ ಕೂಡಲೇ ಚಿಕ್ಕಜಾಲ ಪೊಲೀಸ್ ಠಾಣೆಗೆ ತೆರಳಿ ಘಟನೆ ಸಂಬಂಧ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಲ್ಲೆ ನಡೆಸಿರುವ ಆರೋಪಿಗಳಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv