ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆರೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಕೊಳ್ಳೆಗಾಲ ತಾಲೂಕಿನಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಲೊಕ್ಕನಹಳ್ಳಿಯ ಉಡುತೊರೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ನಾಲ್ವರು ರಕ್ಷಣೆ ಮಾಡಿದ್ದಾರೆ.
ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ನಾಲ್ವರು ಯುವಕರು ತಮ್ಮ ಪ್ರಾಣದ ಹಂಗನ್ನು ತೊರೆದು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ರಸ್ತೆ ದಾಟಲು ಹೋಗುತ್ತಿದ್ದ ಸಂರ್ಭದಲ್ಲಿ ಈ ಅವಘಡ ಸಂಭವಿಸಿದೆ.
ರಸ್ತೆಯ ಪಕ್ಕದಲ್ಲಿದ್ದ ಯುವಕರಿಗೆ ಕೊಚ್ಚಿ ಹೋಗುತ್ತಿರುವ ಯುವಕನ ಚೀರಾಟ ಕೇಳಿದೆ. ಕೂಡಲೇ ನಾಲ್ವರು ನೀರಿಗೆ ಧುಮುಕಿ ಯುವಕನನ್ನು ರಕ್ಷಣೆ ಮಾಡಿದ್ದಾರೆ.
https://youtu.be/Hu39g_ivsoM