ಮಂಡ್ಯ: ಟ್ರಾಫಿಕ್ನಲ್ಲಿ ನಿಂತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನ ಎದುರು ಏಕಾಏಕಿ ಬೈಕ್ ನಿಲ್ಲಿಸಿದ ಯುವಕನೊಬ್ಬ ಅಲ್ಲಾಹು ಅಕ್ಬರ್(Allahu Akbar) ಎಂದು ಘೋಷಣೆ ಕೂಗುವ ಮೂಲಕ ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ನಡೆದಿದೆ.
ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಸಂಚಾರ ದಟ್ಟಣೆಯಿಂದಾಗಿ ಕೆಎಸ್ಆರ್ಟಿಸಿ ಬಸ್ ನಿಂತಿತ್ತು. ಈ ವೇಳೆ ಬೈಕ್ನಲ್ಲಿ ಬಂದ ಮುಸ್ಲಿಂ ಯುವಕನೊಬ್ಬ ಏಕಾಏಕಿ ಬಸ್ನ ಮುಂಭಾಗದಲ್ಲಿ ತನ್ನ ಬೈಕ್ ನಿಲ್ಲಿಸಿದ್ದಾನೆ. ಬಳಿಕ ಬಸ್ ಎದುರು ನಿಂತು ಜೋರಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಲಾರಂಭಿಸಿದ್ದಾನೆ. ಯುವಕನ ಈ ದಿಢೀರ್ ಮತ್ತು ಅನಿರೀಕ್ಷಿತ ವರ್ತನೆಯಿಂದ ಬಸ್ನಲ್ಲಿದ್ದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಕೆಲಕಾಲ ಗಾಬರಿಗೊಂಡು ಆತಂಕಕ್ಕೊಳಗಾದರು.
ಸರ್ಕಾರಿ ಬಸ್ಗೆ ಅಡ್ಡಲಾಗಿ ವಾಹನ ನಿಲ್ಲಿಸಿ, ಜನನಿಬಿಡ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಧಾರ್ಮಿಕ ಘೋಷಣೆಗಳನ್ನು ಕೂಗಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಬಗ್ಗೆ ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಶುರುವಾಗಿದೆ.
ಸಂಚಾರಕ್ಕೆ ಅಡ್ಡಿಪಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನಾವಶ್ಯಕವಾಗಿ ಗೊಂದಲ ಹಾಗೂ ಭಯದ ವಾತಾವರಣ ಸೃಷ್ಟಿಸಲು ಮುಂದಾದ ಯುವಕನ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪೊಲೀಸರು ತಕ್ಷಣವೇ ಆ ಯುವಕನನ್ನು ಪತ್ತೆಹಚ್ಚಿ, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
