ಹಾವೇರಿ: ‘ಮುಂದಿನ ಜನ್ಮ ಅಂತಾ ಇದ್ದರೆ ನಾನು ನಿನ್ನವನಾಗಿ ಹುಟ್ಟಿಬರುವೆ’ ಎಂದು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ (Instagram) ಹಾಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ನಗರದ ದೇವದಾರ್ ಏರಿಯಾದಲ್ಲಿ ನಡೆದಿದೆ.
24 ವರ್ಷದ ಮಂಜುನಾಥ್ ಅಗಡಿ ಎಂದು ಆತ್ಮಹತ್ಯೆಗೆ ಶರಣಾದ ಯುವಕ. ಮಂಜುನಾಥ್ ಅಗಡಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ.
ಕಳೆದ ಎರಡು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಮಂಜುನಾಥ್, ಇತ್ತೀಚೆಗೆ ಆಕೆಯನ್ನು ಕರೆದುಕೊಂಡು ಹೋಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದ. ಆದರೆ ಈ ಮದುವೆ ಯುವತಿಯ ಪೋಷಕರಿಗೆ ಇಷ್ಟವಿರಲಿಲ್ಲ. ಈ ಹಿನ್ನೆಲೆಯಲ್ಲಿ ಯುವತಿಯ ಪೋಷಕರು ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಕೆಲ ದಿನಗಳ ಹಿಂದೆ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ವಿಚಾರಣೆಯೂ ನಡೆದಿತ್ತು.ಇದನ್ನೂ ಓದಿ: ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸುವ ವ್ಯವಸ್ಥೆ ಉಚಿತ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಟಾಂಗ್
ವಿಚಾರಣೆ ಬಳಿಕ ಯುವತಿಯನ್ನು ಬಲವಂತವಾಗಿ ಮನೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಮಂಜುನಾಥ್ ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಿಕ್ಕನಾಯಕನಹಳ್ಳಿ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣಿಗೆ ಶರಣು

