ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರಿನ (Maddur) ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆಗೆ ಶರಣಾದ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಬಸ್ಸಿನ ಹಿಂಬದಿ ಚಕ್ರ ಯುವಕನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಅರುಣ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆ – ಇಂದು ಕರಾವಳಿಗೆ ಬಿಸಿಗಾಳಿ ಎಚ್ಚರಿಕೆ
Advertisement
Advertisement
ಯುವಕ ಆತ್ಮಹತ್ಯೆಗೆ ಶರಣಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ
Advertisement