ಚಿತ್ರದುರ್ಗ: ಮರಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಬ್ಬೇನಹಳ್ಳಿಯ ನಾಗರಾಜ(24) ಆತ್ಮಹತ್ಯೆಗೆ ಶರಣಾದ ಯುವಕ. ನಾಗರಾಜ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಖಾಸಗಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಮೂರು ದಿನಗಳ ಹಿಂದೆಯಷ್ಟೇ ಸ್ವಗ್ರಾಮಕ್ಕೆ ಬಂದಿದ್ದ. ಆದರೆ ಇದ್ದಕ್ಕಿದ್ದಂತೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
Advertisement
Advertisement
ನಾಗರಾಜ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಮುಂಜಾನೆ ಗ್ರಾಮಸ್ಥರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಬೇಕಿದೆ.
Advertisement