ಬೆಂಗಳೂರು: ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಸುಮಂತ್(25) ಎಂದು ಗುರುತಿಸಲಾಗಿದೆ. ಆನೇಕಲ್ ತಾಲೂಕಿನ ಗಡಿ ತಮಿಳುನಾಡಿಗೆ ಹೊಂದಿಕೊಂಡಿರುವ ಹೊಸೂರು ರಸ್ತೆಯ ಗುಡ್ನಹಳ್ಳಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Advertisement
ಗುರುವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ಸುಮಂತ್ ಮಧ್ಯಾಹ್ನ ಕೆಎ.51.ಎನ್.8958 ನ ಕಾರಿನಲ್ಲಿ ಬಂದಿದ್ದು, ಕಾರನ್ನು ಕರೆಯ ಸಮೀಪ ನಿಲ್ಲಿಸಿ ಏಕಾಏಕಿ ಕೆರೆಗೆ ಹಾರಿದ್ದಾನೆ. ಬಳಿಕ ಅಲ್ಲಿಯೇ ಇದ್ದ ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಸುಮಂತ್ ನನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಆದ್ರೆ ಅಷ್ಟರಲ್ಲಿ ಯುವಕ ಸಂಪೂರ್ಣವಾಗಿ ಮುಳುಗಿದ್ದಾನೆ.
Advertisement
Advertisement
ನಾವು ಕಾರಿನಲ್ಲಿ ಸ್ವಲ್ಪ ದೂರದ ಹಿಂದೆ ಬರುತ್ತಿದ್ದೆವು. ಯುವಕ ಏಕಾಏಕಿ ಕಾರು ನಿಲ್ಲಿಸಿ ಕೆರೆಗೆ ಹಾರಿದ್ದಾನೆ. ನಾವು ರಕ್ಷಿಸಲು ಮುಂದಾಗುವಷ್ಟರಲ್ಲಿ ಆತ ನೀರಿನಲ್ಲಿ ಮುಳುಗಿದ್ದನು. ನಂತರ ನಾವು ಆನೇಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Advertisement
ಮಾಹಿತಿ ತಿಳಿದು ಘಟನೆ ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv