ಬೆಂಗಳೂರು: ಯುವಕನೊಬ್ಬ ಫ್ಯಾನ್‍ಗೆ ವೇಲ್ ನಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವಾಪ್ತಿಯ ಪಾಪಣ್ಣ ಲೇಔಟ್‍ನಲ್ಲಿ ಘಟನೆ ನಡೆದಿದೆ.
26 ವರ್ಷದ ಮಹೇಶ್ ಚೌಹಾನ್ ಆತ್ಮಹತ್ಯೆಗೆ ಶರಣಾದ ಯುವಕ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದ ಮಹೇಶ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದೆ. ಖಿನ್ನತೆಯಿಂದಾಗಿ ಆತ್ಮಹತ್ಯೆಗೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Advertisement
ಬುಧವಾರ ಸಂಜೆ ಆರು ಗಂಟೆಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಹೇಶ್ ಸಂಬಂಧಿಕರ ಬಳಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.