ಶಿವಮೊಗ್ಗ: ಜಿಲ್ಲೆಯ ಮೆಗಾನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮಾರು 25 ವರ್ಷದ ಯುವಕ ಎಂದು ಅಂದಾಜಿಸಲಾಗಿದೆ. ಆದರೆ ಮೃತ ಯುವಕನ ಗುರುತು ಇನ್ನೂ ಪತ್ತೆ ಆಗಿಲ್ಲ. ಶುಕ್ರವಾರ ಮಧ್ಯಾಹ್ನದ ವೇಳೆಗೆ ಈತ ಆಸ್ಪತ್ರೆಯ ಮೇಲೆ ಹೋಗಿ ಎಮರ್ಜೆನ್ಸಿ ವಾರ್ಡಿನ ಮುಂಭಾಗದಲ್ಲಿ ಹಾರಿ ಬಿದ್ದಿದ್ದಾನೆ.
ಈ ವೇಳೆ ಅಲ್ಲೆ ಇದ್ದವರು ಯುವಕ ಬಿದ್ದ ತಕ್ಷಣವೇ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಯುವಕನ ಆತ್ಮಹತ್ಯೆಗೆ ಕಾರಣವೇನು ಎಂಬ ವಿಷಯಗಳ ಬಗ್ಗೆ ತನಿಖೆಯನ್ನು ಮುಂದುವರೆಸಿದ್ದಾರೆ.