ನವದೆಹಲಿ: ಬಿಜೆಪಿ ನಾಯಕರಾದ ಸಿ.ಟಿ.ರವಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಆಗಬೇಕೆಂದು ಬಟ್ಟೆ ಹೊಲಿಸಿಕೊಂಡಿದ್ದರು. ಆದರೀಗ ಮುಖ್ಯಮಂತ್ರಿ ಸ್ಥಾನ ಸಿಗದೆ ಅವರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎನ್ನುವ ಬಗ್ಗೆ ನಾವು ಸರ್ಟಿಫಿಕೇಟ್ ಕೊಡಬೇಕಾದ ಅಗತ್ಯ ಇಲ್ಲ. ಬಿಜೆಪಿ ನಾಯಕರೇ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎಂದು ಹೇಳುತ್ತಾರೆ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬುದ್ಧಿ ಭ್ರಮಣೆ ಆಗಿರುವ ಬಿಜೆಪಿ ನಾಯಕರಿಗೆ ಕೌನ್ಸೆಲಿಂಗ್ ಮಾಡಿಸಲಿ ಎಂದು ಮನವಿ ಮಾಡಿದರು. ಹಾಗಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರನ್ನು ಮೆಚ್ಚಿಸಲು ಆ ಮೂಲಕ ಪದವಿ ಗಳಿಸಲು ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ದೂರಿದರು.
Advertisement
Advertisement
ಸಿ.ಟಿ.ರವಿಯದ್ದು ಕುಟುಂಬ ರಾಜಕಾರಣ ಅಲ್ವಾ?: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಚಿಕ್ಕಮಗಳೂರು ಮಹಿಳಾ ಮೋರ್ಚಾ ಉಪಾಧ್ಯಕ್ಷರನ್ನಾಗಿ ಸಿ.ಟಿ. ರವಿ ಅವರ ಮಡದಿ ಪಲ್ಲವಿ ಅವರನ್ನು ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿಯಲ್ಲಿ ಸಮರ್ಥ ಮಹಿಳಾ ಕಾರ್ಯಕರ್ತರು ಇರಲಿಲ್ಲವೇ? ಸಿ.ಟಿ.ರವಿ ಪತ್ನಿ ನೇಮಕ ಕುಟುಂಬ ರಾಜಕಾರಣ ಅಲ್ಲವೇ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಗಣೇಶೋತ್ಸವ ಆಚರಿಸ್ತೇವೆ, ಗುಂಡು ಹೊಡೆಯೋದಾದ್ರೆ ಹೊಡೆಯಿರಿ
Advertisement
Advertisement
ಸಿ.ಟಿ.ರವಿ ಕಾಂಗ್ರೆಸ್ ಪಕ್ಷ ದೇಶದಲ್ಲಿ 70 ವರ್ಷದಿಂದ ಏನೂ ಮಾಡಿಲ್ಲ ಎಂದು ಹೇಳುತ್ತಾರೆ. ಇದೇ ವೇಳೆ 217 ಯೋಜನೆಗಳಿಗೆ ಕಾಂಗ್ರೆಸ್ ನಾಯಕರ ಹೆಸರನ್ನು ಇಡಲಾಗಿದೆ ಎಂದು ಕೂಡ ಹೇಳುತ್ತಾರೆ. ಕಾಂಗ್ರೆಸ್ ಯೋಜನೆಗಳನ್ನು ನೆನಪಿಸಿಕೊಂಡ ಸಿ.ಟಿ ರವಿ ಅವರಿಗೆ ಧನ್ಯವಾದಗಳು. ಆದರೆ ಸಿ.ಟಿ. ರವಿ ಅವರು ಸೇರಿದಂತೆ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಂದಿರಾ ಗಾಂಧಿ ಅವರು ‘ಉಳುವವನೇ ಒಡೆಯ’ ಎಂಬ ಯೋಜನೆ ತಂದರು. ಉಳುವವನೇ ಒಡೆಯ ಯೋಜನೆಯ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಇದು ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆ ಎಂದು ಹೇಳಿದರು. ಇದನ್ನೂ ಓದಿ: ರಾಷ್ಟ್ರಧ್ವಜದ ಧ್ವಜದ ಮೇಲೆ ಬಿಜೆಪಿ ಬಾವುಟ – ಕಾಂಗ್ರೆಸ್, ಟಿಎಂಸಿ ಪ್ರಶ್ನೆ
ಬಿಜೆಪಿ ಎಂದರೆ ಬೆಲೆ ಏರಿಕೆ!: ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆ ಆಗಿದ್ದಾರೆ. ಆದರೆ ಅವರು ಎಂದಾದರೂ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರಾ ಅಥವಾ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಜಿಎಸ್ ಟಿ ದುಡ್ಡು ಬಂದಿಲ್ಲದಿರುವ ಬಗ್ಗೆ ಧ್ವನಿ ಎತ್ತಿದ್ದಾರಾ? ಕೇಂದ್ರ ಸರ್ಕಾರದ ಕಳಪೆ ನಿರ್ವಹಣೆಯಿಂದ ಕೊರೋನಾ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತಿದ್ದಾರಾ? ಅಲ್ಲದೆ ದೇಶಾದ್ಯಂತ ಈಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿದೆ. ಅಡುಗೆ ಅನಿಲದ ಬೆಲೆ ಏರಿಕೆ ಆಗಿದ್ದು, ಬಿಜೆಪಿ ಎಂದರೆ ಬೆಲೆ ಏರಿಕೆ ಎನ್ನುವಂತಾಗಿದೆ. ಬಿಜೆಪಿ ನಾಯಕರು ಈ ವಿಷಯಗಳ ಬಗ್ಗೆ ಚರ್ಚೆ ಮಾಡಲಿ ಎಂದು ಶ್ರೀನಿವಾಸ್ ಬಿ.ವಿ. ತಾಕೀತು ಮಾಡಿದರು.