ಬೆಂಗಳೂರು: ನೀಟ್ (NEET) ಪರೀಕ್ಷಾ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಹಲ್ದವಾನಿಯಲ್ಲಿ ಆದ ಅವಮಾನ ಖಂಡಿಸಿ ಯೂತ್ ಕಾಂಗ್ರೆಸ್ (Congress) ಕಾರ್ಯಕರ್ತರು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಬಿಜೆಪಿ (BJP) ಕಚೇರಿಗೆ ಮುತ್ತಿಗೆ ಹಾಕಲು ನೂರಾರು ಕಾರ್ಯಕರ್ತರು ಪೊಲೀಸರ ಬ್ಯಾರಿಕೇಡ್‌ಗಳನ್ನು ತಳ್ಳಿ, ಮುರಿದು ಕಚೇರಿ ಕಡೆಗೆ ನುಗ್ಗಲು ಯತ್ನಿಸಿದ್ದಾರೆ. ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಗೆ ಡಿಕೆಶಿ – ತಡರಾತ್ರಿ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ

ಈ ವೇಳೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಆರೋಪ ಮಾಡಿದರು. ಬಳಿಕ ಬಿಜೆಪಿ ಕಚೇರಿ ಮುಂದೆ ಭಾರೀ ಹೈಡ್ರಾಮ ನಡೆಯಿತು. ತಳ್ಳಾಟ ನೂಕಾಟ ಜೋರಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ರು ಹರಸಾಹಸಪಟ್ಟರು. ಈ ವೇಳೆ, ನುಗ್ಗಿ ಬಂದ ಕಾರ್ಯಕರ್ತರನ್ನ ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಪೊಲೀಸ್ ವಾಹನದ ಮೇಲೆ ಹತ್ತಿ ಕಾರ್ಯಕರ್ತರು ಪ್ರತಿಭಟಿಸಿದರು. ಬಳಿಕ ಹರಸಾಹಸ ಪಟ್ಟು ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದು ಪೊಲೀಸರು ಕರೆದೊಯ್ದರು.
ಯೂತ್ ಕಾಂಗ್ರೆಸ್ ಪ್ರತಿಭಟನೆಯನ್ನು ಶಾಸಕ ಅಶ್ವಥ್‌ನಾರಾಯಣ್ ಖಂಡಿಸಿದ್ದಾರೆ. ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುವುದು, ಕಾನೂನು ದುರ್ಬಳಕೆ ಮಾಡಿಕೊಳ್ಳುವುದು ಖಂಡನೀಯ. ಕಾನೂನು ವ್ಯವಸ್ಥೆ ಬದುಕಿದ್ಯಾ ಸತ್ತಿದ್ಯಾ ಗೊತ್ತಿಲ್ಲ. ಗೃಹ ಸಚಿವರ ಅ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಸರ್ಕಾರಕ್ಕೆ ಗೌರವ ತರುವಂತೆ ಕೆಲಸ ಮಾಡಲಿ ಎಂದಿದ್ದಾರೆ. ಇದನ್ನೂ ಓದಿ: ಕುಟುಂಬ ಸಮೇತ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್
