– ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯ
ಬೆಂಗಳೂರು: ದಿಗ್ಬಂಧನದಲ್ಲಿರುವ ನಮ್ಮ ಶಾಸಕರನ್ನು ಬಿಡಿಸಿಕೊಡಿ ಎಂದು ಯೂತ್ ಕಾಂಗ್ರೆಸ್ ಹಾಗೂ ಕ್ಷೇತ್ರದ ಜನರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಶಾಸಕ ಮಹೇಶ್ ಕುಮಟಳ್ಳಿ ಅವರಿಗಾಗಿ ಅಥಣಿ ಯೂತ್ ಕಾಂಗ್ರೆಸ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪತ್ತೆಗಾಗಿ ಕ್ಷೇತ್ರದ ಜನರು ಮನವಿ ಸಲ್ಲಿಸಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಬರುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಪತ್ರದ ಮೂಲಕ ಸ್ಪೀಕರ್ ಅವರಿಗೆ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿರುವ ರಮೇಶ್ ಕುಮಾರ್ ಅವರು, ಗೃಹ ಇಲಾಖೆಗೆ ಪ್ರಕರಣ ವರ್ಗಾವಯಿಸಿದ್ದು, ಶಾಸಕರ ಪತ್ತೆ ಮಾಡುವಂತೆ ತಿಳಿಸಿದ್ದಾರಂತೆ. ಇದನ್ನು ಓದು: ಬಂಡಾಯ ಶಾಸಕರ ಅನರ್ಹತೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ ಕಾಂಗ್ರೆಸ್
Advertisement
Advertisement
ಪತ್ರದಲ್ಲಿ ಏನಿದೆ?:
ಅಥಣಿ ಮತ ಕ್ಷೇತ್ರದ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ವಕೀಲ ಪ್ರಮೋದ್ ಹಿರೇಮನಿ ಅವರು ಈ ಪತ್ರವನ್ನು ಬರೆದಿದ್ದಾರೆ. ಶಾಸಕ ಮಹೇಶ್ ಕಮಟಳ್ಳಿ ಅವರ ಗೆಲುವಿಗೆ ನಾನು ಪ್ರಮುಖ ಪಾತ್ರವಹಿಸಿದ್ದೇನೆ. ಕಳೆದ ಕೆಲವು ತಿಂಗಳಿಂದ ಶಾಸಕರು ಕ್ಷೇತ್ರಕ್ಕೆ ಬರದೆ ತಮ್ಮ ಕಚೇರಿಗೆ ಬೀಗ ಹಾಕಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನು ಓದು: ಬಂಡಾಯ ಶಾಸಕರ ರೂಮ್ ಮುಂದೇ ‘ಡು ನಾಟ್ ಡಿಸ್ಟ್ರಬ್’ ಬೋರ್ಡ್
Advertisement
ಈ ಎಲ್ಲ ಬೆಳವಣಿಗೆಯನ್ನು ನೋಡಿದರೆ ಶಾಸಕರನ್ನು ಯಾರೋ ಅಪಹರಿಸಿ ಗೃಹ ಬಂಧನದಲ್ಲಿ ಇಟ್ಟಿದ್ದಾರೆ ಎಂದು ಅಥಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ಈ ಸಂಬಂಧ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದೇವೆ. ಈ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದರೂ ಶಾಸಕರು ಕ್ಷೇತ್ರ ಅಥವಾ ಅಧಿವೇಶನಕ್ಕೆ ಬರುತ್ತಿಲ್ಲ. ಇದರಿಂದಾಗಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ ಎಂದು ಅಥಣಿ ಯೂತ್ ಕಾಂಗ್ರೆಸ್ ಕೇಳಿಕೊಂಡಿದೆ.
Advertisement
ಗೋಕಾಕ ಕ್ಷೇತ್ರದಿಂದ ಕಳೆದ ಐದು ಬಾರಿ ಆಯ್ಕೆಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಪತ್ತೆಯಾಗಿದ್ದಾರೆ. ಕಳೆದ ಐದು ತಿಂಗಳಿನಿಂದ ಬೆರೆಳೆಣಿಕೆಯಷ್ಟು ದಿನಗಳು ಮಾತ್ರ ಕ್ಷೇತ್ರಕ್ಕೆ ಬಂದಿದ್ದಾರೆ. ಕ್ಷೇತ್ರದ ಜನತೆಯ ಕುಂದುಕೊರತೆ ಆಲಿಸುತ್ತಿಲ್ಲ. ಅವರ ಮನೆ ಹಾಗೂ ಕಾರ್ಯಾಲಯದಲ್ಲಿ ವಿಚಾರಿಸಿದರೆ ಮಾಜಿ ಸಚಿವರು ಮುಂಬೈನಲ್ಲಿ ಇರುವುದಾಗಿ ಹೇಳುತ್ತಿದ್ದಾರೆ. ಕ್ಷೇತ್ರ ಅಭಿವೃದ್ಧಿಯ ವಿಚಾರವಾಗಿ ಮಾತನಾಡಲು ಮಾಜಿ ಸಚಿವರು ಕಲಾಪದಲ್ಲಿ ಭಾಗವಹಿಸಿಲ್ಲ ಎಂದು ಜನರು ಆರೋಪಿಸಿದ್ದಾರೆ.
ಕ್ಷೇತ್ರಕ್ಕೆ ಆದಷ್ಟು ಬೇಗ ಭೇಟಿ ನೀಡಿ, ಜನರ ಕುಂದುಕೊರತೆ ಆಲಿಸುವಂತೆ ರಮೇಶ್ ಜಾರಕಿಹೊಳಿ ಅವರಿಗೆ ಸೂಚನೆ ನೀಡಬೇಕು. ಒಂದು ವೇಳೆ ಅವರು ಒಪ್ಪದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರದ ಮೂಲಕ ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv