ಬೆಂಗಳೂರು: ನಗರದ ಹೊರವಲಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯದಲ್ಲಿ ಅನುಮಾನಾಸ್ಪದವಾಗಿ ಮನೆಯೊಂದರಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ.
ಸಂಪಂಗಿರಾಮನಗರ ಮೂಲದ ಪವನ್(19) ಅನುಮಾನಾಸ್ಪದವಾಗಿ ಸಾವನಪ್ಪಿರುವ ದುರ್ದೈವಿ. ಈತ ಮೃತಪಟ್ಟು 3 ದಿನಗಳು ಕಳೆದಿದೆ. ಆದರೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಪವನ್ ಪೋಷಕರು ಹಬ್ಬಕ್ಕೆಂದು ತಮಿಳುನಾಡಿಗೆ ಹೋಗಿದ್ದರು. ಹೀಗಾಗಿ ಈತ ಮನೆಯಲ್ಲಿ ಒಬ್ಬನೇ ಇದ್ದನು. ಪೋಷಕರು ಹಬ್ಬ ಮುಗಿಸಿ ಮನೆಗೆ ಹಿಂದಿರುಗಿ ಬಂದಿದ್ದಾರೆ. ಆಗ ಮನೆಯಲ್ಲಿ ಅರೆನಗ್ನ ಸ್ಥಿತಿಯನ್ನು ಮಗನ ಮೃತದೇಹ ಕಂಡುಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ. ಮೃತನ ಶವ ಅರೆನಗ್ನ ರೀತಿಯಲ್ಲಿ ಬಿದ್ದಿರುವುದು ಹಲವು ಶಂಕೆಗೆ ಕಾರಣವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews