ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಚಿತ್ರದುರ್ಗದ ದೊಡ್ಡಿಗನಹಾಲ ಗ್ರಾಮದ ಮಾರುತಿ(22) ಮೃತಪಟ್ಟ ಯುವಕ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಹೆನ್ನಾಗರ ಗೇಟ್ ಬಳಿ ಮುಂಜಾನೆ ಮಾರುತಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಾರುತಿಯ ಶವ ಛಿದ್ರವಾಗಿದ್ದು, ಎನ್. ಎಚ್.ಐ ಅಂಬುಲೆನ್ಸ್ ಚಾಲಕ ಗಣಪತಿ ಶವದ ಭಾಗಗಳನ್ನು ಒಟ್ಟುಗೂಡಿಸಿ ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv