ಮಂಡ್ಯ: ಸ್ನೇಹಿತನ ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ರಸ್ತೆಯ ಹಂಪ್ ಎಗರಿಸಿ ಆಯತಪ್ಪಿ ಬಿದ್ದು ಲೈನ್‍ಮ್ಯಾನ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ರಂಗನಾಥಪುರ ಗೇಟ್ ಬಳಿ ನಡೆದಿದೆ.
ಅಭಿಷೇಕ್(25) ಮೃತ ಅಪಘಾತದಲ್ಲಿ ಮೃತ ವ್ಯಕ್ತಿ. ಅಭಿಷೇಕ್ ಉಯ್ಗೋನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಬೂಕನಕೆರೆ ಗ್ರಾಮದ ನಿವಾಸಿಯಾಗಿರುವ ಅಭಿಷೇಕ್ ಕೆ.ಆರ್.ಪೇಟೆ ಪಟ್ಟಣದಲ್ಲಿ ಸ್ನೇಹಿತನ ಮದುವೆ ರಿಸೆಪ್ಷನ್ ಮುಗಿಸಿಕೊಂಡು ಬರುವಾಗ ರಂಗನಾಥಪುರ ಗೇಟಿನಲ್ಲಿರುವ ರಸ್ತೆ ಉಬ್ಬಿನ ಬಳಿ ಬೈಕಿನಿಂದ ಆಯತಪ್ಪಿ ಕೆಳಗೆ ಬಿದ್ದು ಮೃತ ಪಟ್ಟಿದ್ದಾರೆ.
Advertisement
ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೆ.ಎನ್ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆ ಮುಂಭಾಗ ಮೃತನ ಬಂಧುಗಳ ಆಕ್ರಂದನವು ಮುಗಿಲು ಮುಟ್ಟಿದ್ದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv