ಬೆಂಗಳೂರು: ಕರೆಂಟ್ ತಂತಿ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಕಿಡಿಕಾರಿದ್ದಾರೆ.
Advertisement
ಮೃತ ದುರ್ದೈವಿ ಯುವಕನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕಿಶೋರ್ ಬಲಿಯಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಮೃತದೇಹವನ್ನ ಬೆಸ್ಕಾಂ ಆವರಣದಲ್ಲಿ ಇಟ್ಟು ಕುಟುಂಬ ನ್ಯಾಯ ಕೇಳಿದೆ. ನಮಗೆ ಅನ್ಯಾಯವಾಗಿದೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಪೊಲೀಸ್ರು ಸಮನ್ಸ್ ನೀಡಿದ್ದಕ್ಕೆ ಪ್ರಿಯಕರನೊಂದಿಗೆ ಬಾಲಕಿ ಆತ್ಮಹತ್ಯೆ
Advertisement
Advertisement
ಮೂಲತ: ಹೊಸಕೋಟೆ ಮೂಲದವನಾಗಿರುವ ಕಿಶೋರ್ ತಂಗಿ ಹಾಗೂ ಬಾವನ ಜೊತೆ ಗೆದ್ದಲಹಳ್ಳಿಯಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಈತ ಕೇವಲ 3 ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದ. ನಿನ್ನೆ ಕೆಲಸ ಮುಗಿಸಿ ಮನೆಗೆ ವಾಪಸ್ ಆಗ್ತಿದ್ದಾಗ ದುರಂತ ಸಂಭವಿಸಿದೆ. ಘಟನೆ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾನವೀಯತೆ ಮರೆತ ಜನ- ಅಪಘಾತದಲ್ಲಿ ಬೈಕ್ ಸವಾರ ಸಾವು
Advertisement
ಬೆಸ್ಕಾಂ ಹಾಗೂ ಖಾಸಗಿ ಕೇಬಲ್ ವಿರುದ್ಧ ಕೇಸ್ ದಾಖಲಾಗಿದೆ. ಬೆಸ್ಕಾಂನಿಂದ ವಿದ್ಯುತ್ ಪ್ರವಹಿಸಿದ್ಯಾ ಅಥವಾ ಖಾಸಗಿ ಕೇಬಲ್ ನಿಂದ ವಿದ್ಯುತ್ ಹರಿದಿದೆಯಾ, ಸದ್ಯ ವಿದ್ಯುತ್ ಪ್ರವಹಿಸಲು ಕಾರಣವಾದ ತಂತಿ ಯಾರಿಗೆ ಸೇರಿದ್ದು ಅನ್ನೋ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ನಡೆಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರ ನಿರ್ಧಾರ ಮಾಡಿದ್ದಾರೆ. ತಡರಾತ್ರಿ ಎಫ್‍ಐಆರ್ ದಾಖಲು ಮಾಡಿರೋ ಪೊಲೀಸರು, ಇಂದು ಮೃತ ಕಿಶೋರ್ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.