ವಿಜಯಪುರ: ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ (Current Shock) ಓರ್ವ ಯುವಕ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ವಿಜಯಪುರ (Vijayapura) ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ.
ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತ ದುರ್ದೈವಿ. ಸೋಲಾಪುರದ ಡಿಜೆ ಯುವಕ ಪ್ರಭಾಕರ್ ಜಂಗಲೆ (22), ಡೋಬಲೆ ಗಲ್ಲಿಯ ಲಖನ್ ಶ್ರೀಕಾಂತ್ ಚವ್ಹಾಣ್ (28) ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ವೈರಲ್ ಫೀವರ್ ಹಾವಳಿ; ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಇಲ್ಲದೇ ರೋಗಿಗಳ ಪರದಾಟ
7ನೇ ದಿನ ಗಣೇಶನ ವಿಸರ್ಜನೆಗೆ ಮೂರ್ತಿಯನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆ (Ganesha Procession) ವೇಳೆ ಯುವಕರು ಡಿಜೆ ಬಾಕ್ಸ್ ಮೇಲೆ ಕುಳಿತು ಕೋಲಿನಿಂದ ವಿದ್ಯುತ್ ತಂತಿಯನ್ನು ಎತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಶುಭಂ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್ ಕೊಟ್ಟ ರಷ್ಯಾ
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
 


 
		 
		 
		 
		 
		
 
		 
		 
		 
		