ಮೈಸೂರು: ನಮ್ಮ ಜೊತೆ ಗಲಾಟೆ ಮಾಡಿ ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದರು ಎಂದು ಯುವಕ ಹೇಳಿದ್ದಾನೆ.
ನಾನು ನನ್ನ ಸ್ನೇಹಿತೆ ರೌಂಡ್ಸ್ ಬಂದಿದ್ದೆವು. ಈ ವೇಳೆ ಅಲ್ಲೇ ಎಣ್ಣೆ ಹೊಡೆಯುತ್ತಿದ್ದ 5-6 ಜನರು ಗಲಾಟೆ ಶುರು ಮಾಡಿದರು. ಇದರಲ್ಲಿ ಎಲ್ಲರೂ ಕನ್ನಡ ಮಾತಾಡುತ್ತಿದ್ರು, ಒಬ್ಬ ಮಾತ್ರ ಬೇರೆ ಬಾಷೆ ಮಾತಾಡ್ತಿದ್ದ. ಇದೇ ಸಂದರ್ಭದಲ್ಲಿ ಗಲಾಟೆ ಮಾಡಿದವರು ನನಗೆ ಕಲ್ಲಲ್ಲಿ ತಲೆಗೆ ಹೊಡೆದ್ರು, ಪ್ರಜ್ಞೆ ತಪ್ಪಿ ಬಿದ್ದೆ. ನಂತರ ಹುಡುಗಿಯನ್ನ ದೂರ ಕರೆದುಕೊಂಡು ಹೋಗಿ ರೇಪ್ ಮಾಡಿದರು ಎಂದು ಯುವಕ ನಡೆದ ಘಟನೆಯನ್ನು ವಿವರಿಸಿದ್ದಾನೆ. ಇದನ್ನೂ ಓದಿ: ಮೈಸೂರಲ್ಲಿ ನಡೆದ ಗ್ಯಾಂಗ್‍ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿ.ಟಿ ರವಿ
ಸದ್ಯ ಯುವಕ ಹಾಗೂ ಯುವತಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಯುವತಿ ಉತ್ತರಭಾರತ ಮೂಲದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.