ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ (Udupi) ಪೂರ್ವ ಮುಂಗಾರು ಚದುರಿ ಬೀಳುತ್ತಿದೆ. ಈ ನಡುವೆ ಗುರುವಾರ ರಾತ್ರಿಯ ಭಾರೀ ಸಿಡಿಲಿಗೆ ಯುವಕನೊಬ್ಬ ಬಲಿಯಾಗಿದ್ದಾನೆ.
ಕಾಪು ತಾಲೂಕು ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಮತ ಯುವಕನನ್ನು ರಕ್ಷಿತ್ ಪೂಜಾರಿ ಎಂದು ಗುರುತಿಸಲಾಗಿದೆ. ಈತ ಶಿರ್ವ ಎಂಎಸ್‍ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ.
Advertisement
Advertisement
ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲಾಘಾತವಾಗಿದೆ. ಕೂಡಲೇ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ರಕ್ಷಿತ್ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಕೋಟಿ ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ – ಮೃತಪಟ್ಟು ವರ್ಷದ ಬಳಿಕ ಪ್ರಕರಣ ಬೆಳಕಿಗೆ
Advertisement
ಬೈಂದೂರು ಹೆಬ್ರಿ ತಾಲೂಕಿನ ಕೆಲವೆಡೆ ನಿನ್ನೆ ಗಾಳಿ ಮಳೆಯಾಗಿದೆ. ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣವಿದ್ದು ಉಡುಪಿ ಜಿಲ್ಲೆಯಲ್ಲಿ ಸರಾಸರಿ 15 ಮಿಲಿಮೀಟರ್ ನಷ್ಟು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಕಾಪು ತಾಲೂಕಿನಲ್ಲಿ ಜಿಲ್ಲೆಯಲ್ಲೇ ಅತೀ ಹೆಚ್ಚು 28 ಮಿಲಿ ಮೀಟರ್ ಮಳೆ ಬಿದ್ದಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಾಧಾರಣ ಮಳೆ ಬೀಳಲಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಇದೆ.