– 18 ಎಕರೆ ಜಮೀನು ಮಾರಾಟ
ರಾಯಚೂರು: ಡಬಲ್ ಹಣದ ಆಸೆಗೆ ಆನ್‌ಲೈನ್ ಗೇಮ್ (Online Game) ಆ್ಯಪ್‌ಗಳಿಂದ ಯುವಕನೋರ್ವ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದೆ.
Advertisement
ರಾಯಚೂರಿನ ಲಿಂಗಸುಗೂರಿನ ಮುದಗಲ್ ನಿವಾಸಿ ಸಹದೇವಪ್ಪ ಹಣ ಕಳೆದುಕೊಂಡ ಯುವಕ. ಅತಿ ಆಸೆಗೆ ಸುಮಾರು 79 ಲಕ್ಷ ರೂ. ಕಳೆದುಕೊಂಡಿದ್ದು, 18 ಎಕರೆ ಜಮೀನು ಸಹ ಮಾರಾಟಮಾಡಿದ್ದಾನೆ. ಕ್ರೈನೈನ್ ಡೇಸ್, ಅಪೆಕ್ಸ್ ನೈನ್, ರಾಧಾ ಎಕ್ಸಚೇಂಜ್, ಬೆಟ್ 365 ಆ್ಯಪ್‌ಗಳಲ್ಲಿ ಹಣ ಮಾಯಾವಾಗಿದೆ. ರಮ್ಮಿ, ಕ್ರಿಕೆಟ್, ಕ್ಯಾಸಿನೋ ಸೇರಿ ಇತರೆ ಆಟಗಳಿಗೆ ದುಡ್ಡು ಕಟ್ಟಿ ದಿವಾಳಿಯಾಗಿದ್ದು, ಆನ್‌ಲೈನ್ ಆ್ಯಪ್‌ಗಳು ಹಾಗೂ ಅವುಗಳ ಡೀಲರ್‌ಗಳಿಂದ ವಂಚನೆಗೆ ಒಳಗಾಗಿದ್ದಾನೆ. ಆ್ಯಪ್ ಡೀಲರ್ ಮೈನುದ್ದೀನ್, ಚನ್ನಬಸವ, ರುದ್ರಗೌಡ, ಹನುಮನಗೌಡ ಎಂಬವರಿಂದ ವಂಚನೆಯಾಗಿದೆ (Fraud) ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರ ದಾರುಣ ಸಾವು
Advertisement
Advertisement
ಹಣ ಪಡೆದು ಲಾಗಿನ್ ಐಡಿ, ಪಾಸ್ ವರ್ಡ್ ಕೊಡುತ್ತಿದ್ದ ಡೀಲರ್‌ಗಳು ಹಣ ದುಪ್ಪಟ್ಟು ಮಾಡಿಕೊಡುವ ಆಸೆ ತೋರಿಸಿ ವಂಚನೆ ಮಾಡಿದ್ದಾರೆ. 2014ರಿಂದ ಇಲ್ಲಿಯವರೆಗೆ ಆನ್‌ಲೈನ್ ಗೇಮ್‌ಗಳ ಮೇಲೆ ಲಕ್ಷಾಂತರ ರೂ. ಸುರಿದ ಯುವಕ ನ್ಯಾಯಕ್ಕಾಗಿ ರಾಯಚೂರು ಎಸ್‌ಪಿಗೆ ದೂರು ನೀಡಿದ್ದಾನೆ. ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಯ ದೊಡ್ಡ ಜಾಲದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾನೆ. ಇದನ್ನೂ ಓದಿ: ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ – ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್
Advertisement
Web Stories