ಚಿಕ್ಕಬಳ್ಳಾಪುರ: ಹಳೆ ದ್ವೇಷ ಮತ್ತು ಒಂದೇ ಹುಡುಗಿಯನ್ನ ಇಬ್ಬರು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರೇಮಿಗಳ ದಿನವೇ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದ ಅಮಾನವೀಯ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಹಾಳ ಗ್ರಾಮದಲ್ಲಿ ನಡೆದಿದೆ.
Advertisement
21 ವರ್ಷದ ಹರೀಶ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ ಯುವಕ. ಮಂಗಳವಾರ ತಡರಾತ್ರಿ ಹರೀಶ್ ಸ್ನೇಹಿತ ಅಂಬರೀಶ್ ಎಂಬವನ ಜೊತೆ ಗ್ರಾಮದ ರಸ್ತೆಯಲ್ಲಿ ನಡದುಕೊಂಡು ಹೊಗುತ್ತಿದ್ದ ವೇಳೆ ಎದುರಿನಿಂದ ಬಂದ ಸಂತೋಷ್, ಹರೀಶ್ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಹರೀಶ್ ಕುಸಿದು ಬಿದ್ದು ಸ್ಥಳದಲ್ಲೇ ಒದ್ದಾಡಿದ್ದಾನೆ. ಈ ವೇಳೆ ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಕೂಡಲೇ ಆಸ್ಪತ್ರೆಗೆ ಒಯ್ದಿದ್ದಾರೆ. ಆದ್ರೆ ಹರೀಶ್ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
Advertisement
Advertisement
ಚಾಕುವಿನಿಂದ ಇರಿದ ಬಳಿಕ ಸಂತೋಷ್ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.