ಮಂಗಳೂರು: ನಗರದಲ್ಲಿ ಮತ್ತೆ ದುಷ್ಕರ್ಮಿಗಳು ತಮ್ಮ ಅಟ್ಟಹಾಸ ಮೆರೆದಿದ್ದಾರೆ. ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ (32) ಎಂದು ಗುರುತಿಸಲಾಗಿದೆ. ಮೃತ ದೀಪಕ್ ಮೊಬೈಲ್ ಕಂಪನಿಯೊಂದರಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲದೇ ಸ್ಥಳೀಯ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನು ಎನ್ನಲಾಗಿದೆ.
Advertisement
Advertisement
ದೀಪಕ್ ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ನಾಲ್ವರ ತಂಡವೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಬಳಿಕ ದುಷ್ಕರ್ಮಿಗಳು ಕಾರಿನಿಂದ ಇಳಿದು ನೇರವಾಗಿ ದೀಪಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ. ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Advertisement
ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.