ಕಲ್ಲಿನಿಂದ ಹೊಡೆದು ಯುವಕನ ಹತ್ಯೆಗೈದ ದುಷ್ಕರ್ಮಿಗಳು – ಸಿಸಿ ಟಿವಿಯಲ್ಲಿ ಕೃತ್ಯ ಸೆರೆ

Public TV
1 Min Read
MURDER 2

ಬೆಳಗಾವಿ: ನಡು ರಸ್ತೆಯಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಪ್ರಕರಣ ಶಿವಬಸವನಗರದಲ್ಲಿ ತಡರಾತ್ರಿ ನಡೆದಿದೆ.

ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬೈಕ್ (Bike) ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಹತ್ಯೆಗೈಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃತ್ಯದಲ್ಲಿ ಮೂರು ಜನ ಭಾಗಿಯಾಗಿರುವ ಶಂಕೆ ಇದೆ. ಹತ್ಯೆ ಬಳಿಕ ಕಿಡಿಗೇಡಿಗಳು ಪರಾರಿಯಾಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

MURDER 1 1

ಯುವಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಯುವಕನನ್ನು ಸಂಚು ರೂಪಿಸಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

Web Stories

Share This Article