ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿ ಪ್ರವಾಸಿಗ ಅಪಾಯದಲ್ಲಿ ಸಿಲುಕಿಕೊಂಡಿದ್ದು, ಹೆಲಿಕಾಪ್ಟರ್ ಮೂಲಕ ಏರ್ ಫೋರ್ಸ್ ಅಧಿಕಾರಿಗಳು ಆತನನ್ನು ರಕ್ಷಣೆ ಮಾಡಿದ್ದಾರೆ.
Advertisement
ದೆಹಲಿ ಮೂಲದ 19 ವರ್ಷದ ನಿಶಾಂತ್ ಗುಲ್ ಅವರನ್ನು ಏರ್ ಫೋರ್ಸ್ ಅಧಿಕಾರಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಬೆಟ್ಟದಿಂದ ಅಪಾಯಕಾರಿ ಜಾಗಕ್ಕೆ ಬಿದ್ದ ಹಿನ್ನೆಲೆ ನಿಶಾಂತ್ ಬೆನ್ನಿಗೆ ಗಂಭೀರ ಗಾಯವಾಗಿದೆ. ಪರಿಣಾಮ ಹೆಲಿಕಾಪ್ಟರ್ ಮೂಲಕವೇ ಯಲಹಂಕ ಏರ್ ಬೇಸ್‍ಗೆ ನಿಶಾಂತ್‍ನನ್ನು ರವಾನೆ ಮಾಡಲಾಗಿತ್ತು. ಅಲ್ಲಿಂದ ಅಸ್ಟರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕಳುಹಿಸಲಾಗಿದೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಬಂದು ಅಪಾಯಕ್ಕೆ ಸಿಲುಕಿದ ಪ್ರವಾಸಿಗ!
Advertisement
Advertisement
ಹೆಲಿಕಾಪ್ಟರ್ ಮೂಲಕ ನಿಶಾಂತ್ ರಕ್ಷಣೆಗಾಗಿ ವಿಂಗ್ ಕಮಾಂಡರ್ ಹರಸಾಹಸ ಪಡುತ್ತಿದ್ರು. ಅಲ್ಲದೆ ಈ ವೇಳೆ ನಿಶಾಂತ್ ಫೋನ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಹುಡುಕಲು ಇನ್ನೂ ಕಷ್ಟವಾಗುತ್ತೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಕೊನೆಯಲ್ಲಿ NDRF ತಂಡ ಸಹ ನಿಶಾಂತ್ ಸಹಾಯಕ್ಕೆ ಆಗಮಿಸಿತು. ಈ ಎಲ್ಲದರ ಪರಿಣಾಮವಾಗಿ ಆತ ಇಂದು ಬದುಕುಳಿದಿದ್ದಾನೆ.
Advertisement
ಏನಿದು ಘಟನೆ?
ದೆಹಲಿ ಮೂಲದ ನಿಶಾಂತ್ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ವೀಕೆಂಡ್ ಎಂದು ಸ್ನೇಹಿತರ ಜೊತೆ ನಂದಿಬೆಟ್ಟಕ್ಕೆ ಬಂದಿದ್ದಾನೆ. ಈ ವೇಳೆ ಅವರು ಬ್ರಹ್ಮಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ಮಾಡಲು ಮುಂದಾಗಿದ್ದಾರೆ. ಟ್ರೆಕ್ಕಿಂಗ್ ಮಾಡುವ ವೇಳೆ ನಿಶಾಂತ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನೇ ಸಹಾಯಕ್ಕಾಗಿ ಸರ್ಕಾರದ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದಾನೆ. ಪರಿಣಾಮ ನಿಶಾಂತ್ ಉಳಿಸಲು ಆಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ಮಾಡಿದ್ದಾರೆ. ಅವರಿಗೆ ಈ ಯುವಕ ಕಡಿದಾದ ಪ್ರದೇಶ ದುರ್ಗಮ ಹಾದಿಯಲ್ಲಿ ಪತ್ತೆಯಾಗಿದ್ದನು. ಇದನ್ನೂ ಓದಿ: ಮಹಾ ಶಿವರಾತ್ರಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭಕ್ತರಿಗಾಗಿ ಹೊಸ ಆ್ಯಪ್ ಬಿಡುಗಡೆ