ಮಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲೆಗೈದು ಪ್ರಿಯಕರ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಪ್ರಾಂತ್ಯ ಗ್ರಾಮದಲ್ಲಿ ನಡೆದಿದೆ.
22 ವರ್ಷದ ಚರಿಷ್ಮಾಳನ್ನು 26 ವರ್ಷದ ಲೋಹಿತ್ ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೋಹಿತ್ ಮಂಗಳೂರು ನಗರದ ಬಜಾಲ್ ನಿವಾಸಿಯಾಗಿದ್ದು, ಚರಿಷ್ಮಾ ಅವರು ಪ್ರಾಂತ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಲೋಹಿತ್ ಆಕೆಯ ಮನೆಗೆ ನುಗ್ಗಿ ಚೂರಿಯಿಂದ ಇರಿದು, ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಆ ಬಳಿಕ ಆಕೆಯ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಇತ್ತ ಪ್ರಿಯತಮನ ಕೃತ್ಯದಿಂದ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಮೂಡಬಿದ್ರೆ ಆಸ್ಪತ್ರೆಗೆ ದಾಖಲಾಯಿಸತಾದ್ರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಲೋಹಿತ್, ಚರಿಷ್ಮಾ ಅವರ ಸಂಬಂಧಿಕನಾಗಿದ್ದು, ಮನೆಗೆ ಆಗಾಗ ಬರುತ್ತಿದ್ದನು ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv