ಕೊಪ್ಪಳ: ಯವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಹತ್ಯೆ ಮಾಡಿದ ಘಟನೆ ಗಂಗಾವತಿ (Gangavathi) ತಾಲೂಕಿನ ಹೊಸ ಅಯೋದ್ಯ ಗ್ರಾಮದಲ್ಲಿ ನಡೆದಿದೆ.
ಪ್ರಗತಿ (19) ಹಾಗೂ ವೆಂಕಟನಾಯ್ಡು (45) ಹತ್ಯೆಯಾದವರು ಎಂದು ತಿಳಿದು ಬಂದಿದೆ. ತಾಯಿ ಸೌಜನ್ಯ (40) ಅವರನ್ನು ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯ ಎಸಗಿದ ಸಾಯಿ ವೆಂಕಟಮಣಿ (18) ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆತನಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
