ಪ್ರೇಯಸಿ ಜೊತೆ ಮಜಾ ಮಾಡಲು ತಾಯಿಯ ಚಿನ್ನವನ್ನೇ ಕದ್ದ

Public TV
1 Min Read
gold jewels 1

ಹೈದರಾಬಾದ್: ಯುವಕನೊಬ್ಬ ತನ್ನ ಪ್ರೇಯಸಿ ಜೊತೆ ಮಜಾ ಮಾಡಲು ಮನೆಯಲ್ಲಿದ್ದ ತನ್ನ ತಾಯಿಯ ಚಿನ್ನಾಭರಣವನ್ನೇ ಕದ್ದ ಘಟನೆ ಆಂಧ್ರ ಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ.

ಅರುಣ್ ಕುಮಾರ್ ಚಿನ್ನ ಕದ್ದ ಆರೋಪಿ. ಅರುಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ತನ್ನ ಪ್ರೀತಿಗಾಗಿ ಅವನು ಮನೆಯಲ್ಲಿ ಕದಿಯಲು ಶುರು ಮಾಡಿದ್ದನು. ಅಲ್ಲದೆ ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ಕದಿಯುತ್ತಿದ್ದನು. ಮನೆಯಲ್ಲಿ ಕಳ್ಳತನ ಆಗುವುದನ್ನು ನೋಡಿ ಯುವಕನ ತಾಯಿ ಈ ಬಗ್ಗೆ ಸಂಜೀವ್ ರೆಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Gold 1 copy

ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ, ಅರುಣ್ ಕುಮಾರ್ ಹಲವು ದಿನಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಯುವತಿಗೆ ಬೇಕಾದ ಅಗತ್ಯಗಳನ್ನು ಪೂರೈಸಲು ಅರುಣ್ ಕುಮಾರ್ ಸಾಕಷ್ಟು ಹಣ ಖರ್ಚು ಮಾಡುತ್ತಿದ್ದನು. ಅಲ್ಲದೆ ಆಕೆಗೆ ಪ್ರತಿ ತಿಂಗಳು ಉಡುಗೊರೆ ನೀಡುತ್ತಿದ್ದನು. ಇದರ ಜೊತೆಗೆ ಆಕೆಯನ್ನು ಹೊರಗೆ ಸುತ್ತಾಡಿಸಲು ಕರೆದುಕೊಂಡು ಹೋಗುತ್ತಿದ್ದನು ಎಂದು ತಿಳಿದು ಬಂದಿದೆ.

MONEY 2

ತನ್ನ ಪ್ರೇಯಸಿಗಾಗಿ ಅರುಣ್ ಮನೆಯಲ್ಲಿ ಕಳ್ಳತನ ಮಾಡುವ ನಿರ್ಧಾರ ಮಾಡುತ್ತಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅರುಣ್ 50 ಸಾವಿರ ನಗದು ಹಾಗೂ 80 ಗ್ರಾಂ ಚಿನ್ನಾಭರಣವನ್ನು ಕದ್ದಿದ್ದಾನೆ. ಚಿನ್ನಾಭರಣ ಹಾಗೂ ಹಣ ಕಾಣಿಸದಿದ್ದಾಗ ಯುವಕನ ತಾಯಿ ಮೊದಲು ಮನೆಯಲ್ಲಿ ಹುಡುಕಾಟ ನಡೆಸಿದ್ದರು. ಬಳಿಕ ಚಿನ್ನಾಭರಣ ಹಾಗೂ ಹಣ ಕಳ್ಳತನವಾಗಿದೆ ಎಂದು ಅರಿತ ಯುವಕನ ತಾಯಿ ತಕ್ಷಣ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅರುಣ್‍ನನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಆತ ಸರಿಯಾದ ಉತ್ತರ ನೀಡಲಿಲ್ಲ. ಹಾಗಾಗಿ ಪೊಲೀಸರು ಅರುಣ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *