ಬೆಂಗಳೂರು: ಬ್ರಿಡ್ಜ್ ಮೇಲಿನಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ವಿಂಡ್ಸನ್ ಮ್ಯಾನರ್ ಹೋಟೆಲ್ ಬಳಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬಿಹಾರ ಮೂಲದ ಅಜಯ್(26) ಎಂದು ಗುರುತಿಸಲಾಗಿದ್ದು, ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಬ್ಲೂವೇಲ್ ಗೇಮ್ ಹೆಚ್ಚಾಗಿ ಅಡುತ್ತಿದ್ದ ಅಜಯ್ ಸೋಮವಾರವಷ್ಟೇ ನಗರಕ್ಕೆ ಆಗಮಿಸಿದ್ದ. ಇದೇ ಆಟ ಆತ್ಮಹತ್ಯೆಗೆ ಪ್ರೇರೆಪಿಸಿದೆ ಎನ್ನಲಾಗಿದೆ. ಇನ್ನೊಂದು ಮಾಹಿತಿಯ ಪ್ರಕಾರ ಅಜಯ್ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.
ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಅಜಯ್‍ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿಸಲಾಗಿದೆ.