ಬೆಳಗಾವಿ: ಜಿಲ್ಲೆಯ ಬೈಲಹೊಂಗಲದಲ್ಲಿ ಕಾಮುಕ ಯುವಕನೊಬ್ಬ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಯುವಕನನ್ನು ಸುಭಾಷ್ ನಾಯ್ಕ್(21) ಎಂದು ಗುರುತಿಸಲಾಗಿದ್ದು, ಈತ 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಕಾಮುಕನಿಗೆ ಜನರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಮುಕನ ಕೃತ್ಯದಿಂದ ಮಗುವಿಗೆ ತೀವ್ರ ರಕ್ತಸ್ರಾವವಾಗಿದ್ದು, ಸದ್ಯ ಆಕೆಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Advertisement
21 ವರ್ಷದ ಸುಭಾಷ್ ನಾಯ್ಕರ್‍ನನ್ನು ವಶಕ್ಕೆ ಪಡೆದ ನೇಸರ್ಗಿ ಪೊಲೀಸರು, ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ದೂರು ದಾಖಲಿಸಿ ತನಿಖೆ ನಡೆಸಿದ್ದಾರೆ.
Advertisement
Advertisement
Advertisement