ಯಾದಗಿರಿ: ಭೀಮಾ ನದಿಯಲ್ಲಿ (Bhima River) ಸ್ನಾನ ಮಾಡಲು ಹೋದ ಯುವಕ ನಾಪತ್ತೆಯಾಗಿರುವ ಘಟನೆ ಯಾದಗಿರಿ (Yadgir) ತಾಲೂಕಿನ ಮಲ್ಹಾರ (Malhar) ಗ್ರಾಮದ ಹೊರಭಾಗದಲ್ಲಿ ನಡೆದಿದೆ.
ರಂಗಯ್ಯ (21) ನಾಪತ್ತೆಯಾದ ಯುವಕ. ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಿ ಸ್ನೇಹಿತರ ಜೊತೆ ಸ್ನಾನಕ್ಕೆ ತೆರಳಿದಾಗ ದುರ್ಘಟನೆ ಸಂಭವಿಸಿದೆ. ನಾಲ್ಕು ಜನ ಸ್ನೇಹಿತರು ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಕಾಲು ಜಾರಿ ಬಿದ್ದ ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ಪ್ರೀತಂಗೌಡಗೆ ಬಿಗ್ ರಿಲೀಫ್; ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್ ತಡೆ
ನಾಪತ್ತೆಯಾದ ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಇನ್‌ಸ್ಟಾ ಪ್ರೇಯಸಿಗೆ ಎಂಗೇಜ್‌ಮೆಂಟ್; ಆರನೇ ಮಹಡಿಯಿಂದ ಜಿಗಿಯಲು ಮುಂದಾದ ಅಪ್ರಾಪ್ತ
