ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಪ್ರವಾಸಿಗರು ಸೆಲ್ಫಿಗಾಗಿ ಹುಚ್ಚು ಸಾಹಸ ಮಾಡುತ್ತಿದ್ದಾರೆ.
ಸೆಲ್ಫಿ ಕ್ಲಿಕ್ಕಿಸಲು ಪ್ರವಾಸಿಗರು ರಕ್ಷಣೆಗೆ ಆಳವಡಿಸಿರುವ ತಡೆಗೋಡೆ ಏರುತ್ತಿದ್ದಾರೆ. ಎತ್ತರದ ಕಬ್ಬಿಣದ ಗ್ರಿಲ್ ಏರಿ ಹೋಗಿ ಅಲ್ಲಿ ಸೆಲ್ಫಿ ಕ್ಲಿಕ್ಕಿಸುತ್ತಿದ್ದಾರೆ. ದಂಡ ವಿಧಿಸಲಾಗುವುದು ಅಂತ ನಾಮಫಲಕವಿದ್ದರೂ ಪ್ರವಾಸಿಗರು ಅದಕ್ಕೆ ಕ್ಯಾರೆ ಎನ್ನುತ್ತಿಲ್ಲ. ಬೆಟ್ಟದಿಂದ ಜಾರಿ ಬೀಳಬಾರದು ಎಂದು ಬೆಟ್ಟದ ತುತ್ತ ತುದಿಗಳಲ್ಲಿ ಕಬ್ಬಿಣದ ಗ್ರಿಲ್ ತಡೆ ಆಳವಡಿಸಲಾಗಿತ್ತು. ಆದರೆ ಪ್ರವಾಸಿಗರು ಸೆಲ್ಫಿ ಹುಚ್ಚಿಗೆ ಈ ರೀತಿಯ ಸಾಹಸ ಮಾಡುತ್ತಿದ್ದಾರೆ.
Advertisement
Advertisement
ಹೊಸ ವರ್ಷದ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದು ಬಂದಿದೆ. ನಂದಿಗಿರಿಧಾಮದ ಸೌಂದರ್ಯ ಕಣ್ತುಂಬಿಕೊಳ್ಳೋಕೆ ಅಂತ ಪ್ರವಾಸಿಗರು ನಾ ಮುಂದು ತಾ ಮುಂದು ಮುಗಿಬಿದ್ದಿದ್ದಾರೆ. ಬೆಳಗ್ಗೆ 8 ಗಂಟೆಯವರೆಗೂ ಪ್ರವಾಸಿಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿಷೇಧ ಹೇರಿತ್ತಾದರೂ ಪ್ರವಾಸಿಗರ ಒತ್ತಡದ ಹಿನ್ನೆಲೆಯಲ್ಲಿ 6 ಗಂಟೆ 30 ನಿಮಿಷಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.
Advertisement
Advertisement
ಮಧ್ಯ ರಾತ್ರಿಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಸಾವಿರಾರು ಮಂದಿ ಪ್ರವಾಸಿಗರು ಕಾದು ಕುಳಿತ್ತಿದ್ದು, ಬೆಳ್ಳಂ ಬೆಳಗ್ಗೆ ವಾಹನಗಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕೊಡಲೇ ಬೈಕ್ ಸವಾರರು ಕಾರು ಸವಾರರು ನಾ ಮುಂದು ತಾ ಮುಂದು ಅಂತ ನಂದಿಬೆಟ್ಟ ಏರಿದ್ದಾರೆ. ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲು ಸಾಲಾಗಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv