Connect with us

Chamarajanagar

ಅಪ್ರಾಪ್ತೆಯರನ್ನು ಪ್ರೀತಿಸಿ ವಿವಾಹ- ಇಬ್ಬರು ಯುವಕರಿಗೆ 10 ವರ್ಷ ಜೈಲು, 5.20 ಲಕ್ಷ ದಂಡ

Published

on

ಚಾಮರಾಜನಗರ: ಅಪ್ರಾಪ್ತೆಯರನ್ನು ಪ್ರೀತಿಸಿ ಮದುವೆಯಾಗಿದ್ದ ಇಬ್ಬರಿಗೆ ತಲಾ 10 ವರ್ಷ ಜೈಲು ಶಿಕ್ಷೆ, 5.20 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 2 ವರ್ಷ ಸಾಧಾರಣ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಜಿಲ್ಲಾ ನ್ಯಾ.ಸದಾಶಿವ ಎಸ್.ಸುಲ್ತಾನ್ ಪುರಿ ಆದೇಶ ಹೊರಡಿಸಿದ್ದು, ಹನೂರು ತಾಲೂಕಿನ ಚೆಲುವ ಹಾಗೂ ಮುತ್ತುರಾಜ್ ಶಿಕ್ಷೆಗೊಳಗಾದ ಅಪರಾಧಿಗಳು. ಅಪ್ರಾಪ್ತೆಯರನ್ನು ಮದುವೆಯಾಗಿ ಲೈಂಗಿಕ ಕ್ರಿಯೆ ನಡೆಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಇಂದು ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿ ಆದೇಶಿಸಿದ್ದಾರೆ. ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ 5.20 ಲಕ್ಷ ರೂ. ದಂಡದ ಹಣವನ್ನು ಬಾಲಕಿಯರಿಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ಆದೇಶಿಸಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾಗಿ ಯೋಗೇಶ್ ವಾದ ಮಂಡಿಸಿದ್ದರು.

ಹನೂರು ತಾಲೂಕಿನ ಗ್ರಾಮವೊಂದರ ನಿವಾಸಿಗಳಾದ ಚೆಲುವ ಹಾಗೂ ಮುತ್ತುರಾಜ್ ಇದೇ ಗ್ರಾಮದಲ್ಲಿ ವಾಸವಿದ್ದ ಇಬ್ಬರು ಬಾಲಕಿಯರನ್ನು 2016ರಲ್ಲಿ ಪ್ರೀತಿಸಿ, ಮನೆಯಿಂದ ತಮಿಳುನಾಡಿಗೆ ಕರೆದೊಯ್ದು ಮದುವೆಯಾಗಿ, ಕೂಲಿ ಕೆಲಸ ಮಾಡುತ್ತಿದ್ದರು. ಬಳಿಕ ಪೊಲೀಸರು ಬಾಲಕಿಯರನ್ನು ಪತ್ತೆಹಚ್ಚಿ ಕರೆತಂದಿದ್ದರು. ಈ ಸಂಬಂಧ ರಾಮಾಪುರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಡಿ ಪ್ರಕರಣ ದಾಖಲಾಗಿತ್ತು.

Click to comment

Leave a Reply

Your email address will not be published. Required fields are marked *