ದಾವಣಗೆರೆ: ವಾಹನ ಡಿಕ್ಕಿಯಾಗಿ ನವಿಲು ಗಂಭೀರ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಗ್ರಾಮದ ಹೊರ ವಲಯದಲ್ಲಿ ನವಿಲು ರಸ್ತೆ ದಾಟುವಾಗ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಕಾಲಿಗೆ ಗಂಭೀರ ಗಾಯಗಳಾಗಿ ರಸ್ತೆಯಲ್ಲಿ ಒದ್ದಾಡುತ್ತಿತ್ತು. ಅದೇ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಯುವಕರ ತಂಡ, ನವಿಲು ನರಳಾಡುತ್ತಿರುವುದನ್ನು ಗಮನಿಸಿದ್ದಾರೆ.
Advertisement
Advertisement
ಕೂಡಲೇ ಯುವಕರೆಲ್ಲರು ಕಾರಿನಿಂದ ಇಳಿದು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಗಾಯಗೊಂಡ ನವಿಲನ್ನು ಯುವಕರು ಅರಣ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
Advertisement
ಯುವಕರ ಕಾರ್ಯಕ್ಕೆ ಬಿಳಚೋಡ್ ಪೊಲೀಸ್ ಠಾಣೆಯ ಪಿಎಸ್‍ಐ ಉಮೇಶ್ ಬಾಬು ಅಭಿನಂಧನೆ ಸಲ್ಲಿಸಿದರು.